ಪೊನ್ನಂಪೇಟೆ, ಅ. ೧೦: ನವರಾತ್ರಿ ಉತ್ಸವದ ಪ್ರಯುಕ್ತ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವಂತೆ ಈ ವರ್ಷವೂ ಶ್ರೀ ದುರ್ಗಾ ನಮಸ್ಕಾರ ಪೂಜೆಯನ್ನು ತಾ.೧೧ ರಿಂದ ತಾ.೨೦ ರವರೆಗೆ ಪ್ರತಿದಿನ ರಾತ್ರಿ ೭ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ತಿಳಿಸಿದ್ದಾರೆ. ತಾ. ೨೧ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ದೊಡ್ಡ ಪೂಜೆ ನಡೆಯಲಿದೆ ಎಂದು ತಿಳಿಸಿದ್ದಾರೆ.