ಗೋಣಿಕೊಪ್ಪಲು, ಅ.೧೨: ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ಸರ್ಕಾರ ೧ ಕೋಟಿ ಅನುದಾನ ಬಿಡುಗಡೆಗೊಳಿಸಿದೆ. ಇದರ ಸದುಪಯೋಗದೊಂದಿಗೆ ದಸರಾ ಜನೋತ್ಸವದ ಸಂಭ್ರಮ ಹೆಚ್ಚಾಗಲಿ ಎಂದು ಕರ್ನಾಟಕ ಸರ್ಕಾರದ ಕೃಷಿ ಸಚಿವ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ನರೇಂದ್ರ ಸ್ವಾಮಿ ಹೇಳಿದರು.

ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿಯ ೪೮ನೇ ವರ್ಷದ ದಸರಾ ಜನೋತ್ಸವದ ಸಾಂಸ್ಕೃತಿಕ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ವರ್ಷದಲ್ಲಿ ಶಾಸಕ ಪೊನ್ನಣ್ಣ ಅವರ ಕೋರಿಕೆ ಮೇರೆ ಗೋಣಿಕೊಪ್ಪ ದಸರಾ ಜನೋತ್ಸವಕ್ಕೆ ೧ ಕೋಟಿ ಅನುದಾನವನ್ನು ನೀಡಲಾಗಿದೆ. ಚಾಮುಂಡೇಶ್ವರಿ ದೇವಿಯ ಆರಾಧನೆಯೊಂದಿಗೆ ಉತ್ತಮ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬರಲಿ, ಗೋಣಿಕೊಪ್ಪ ದಸರಾ ಮತ್ತಷ್ಟು ಸಂಭ್ರಮದಿAದ ನಡೆಯುವಂತಾಗಲಿ ಎಂದು ಆಶಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವೀರಾಜಪೇಟೆ ಶಾಸಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಮಾತನಾಡಿ ಕಳೆದ ೪೮ ವರ್ಷಗಳ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಹಿಂದೆ ದಸರಾ ಸಮಿತಿಯನ್ನು ಹುಟ್ಟು ಹಾಕಿದ ಹಿರಿಯರು ಇಂದಿಗೂ ಕೂಡ ಜನೋತ್ಸವವನ್ನು ವರ್ಷದಿಂದ ವರ್ಷಕ್ಕೆ ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ.

ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡಲು ಉತ್ತಮ ವೇದಿಕೆಯನ್ನು ನಿರ್ಮಿಸಿ ಗ್ರಾಮೀಣ ಪ್ರತಿಭೆಗಳಿಗೆ ವಿಫುಲ ಅವಕಾಶ ನೀಡಲು ಕಾಂಗ್ರೆಸ್ ಸರ್ಕಾರ ಜನೋತ್ಸವ ಕಾರ್ಯಕ್ರಮಕ್ಕೆ ಅನುದಾನವನ್ನು ನೀಡುತ್ತಾ ಬರುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಕೊಡಗಿನ ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾಕ್ಕೆ ಅನುದಾನವನ್ನು ಸಕಾಲದಲ್ಲಿ ಬಿಡುಗಡೆಗೊಳಿಸಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕಾವೇರಿ ದಸರಾ ಸಮಿತಿಯ ಸ್ಥಾಪಕರು ಉದ್ಯಮಿಗಳಾದ ಎಂ.ಜಿ.ಮೋಹನ್ ಮಾತನಾಡಿ ಆರಂಭದ ವರ್ಷದಲ್ಲಿ ಸಾರ್ವಜನಿಕರ ಸಹಕಾರದಿಂದ ದಸರಾ ನಾಡ ಹಬ್ಬವನ್ನು ಆರಂಭಿಸಲಾಯಿತು. ಇದೀಗ ಶಾಸಕ ಪೊನ್ನಣ್ಣ ಅವರ ಪ್ರಯತ್ನದಿಂದ ಸರ್ಕಾರದಿಂದ ೧ ಕೋಟಿ ಅನುದಾನ ಲಭಿಸಿರುವುದು ದಸರಾ ಯಶಸ್ವಿಗೆ ಸಹಕಾರಿಯಾಗಲಿದೆ ಎಂದರು.

ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಕಡೇಮಾಡ ಸುನೀಲ್ ಮಾದಪ್ಪ ಮಾತನಾಡಿದರು. ಕಾವೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಕೊಡಗು ಜಿಲ್ಲಾಧಿಕಾರಿ ಎಸ್.ಜಿ. ಸೋಮಶೇಖರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ತಹಶೀಲ್ದಾರ್ ಸಂಜನಾ, ಹಿರಿಯರಾದ ಅಜಿತ್ ಅಯ್ಯಪ್ಪ, ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ಕಿರಿಯಮಾಡ ಅರುಣ್ ಪೂಣಚ್ಚ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾವೇರಿ ದಸರಾ ಸಮಿತಿಯ ಸಂಚಾಲಕÀ ಬಿ.ಎನ್.ಪ್ರಕಾಶ್, ಕಾವೇರಿ ದಸರಾ ಸಮಿತಿಯ ಉಪಾಧ್ಯಕ್ಷ ನಾಯಿಂದಿರ ಶಿವಾಜಿ, ಕಾವೇರಿ ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಕಂದಾ ದೇವಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವಕಾಮತ್, ಪದಾಧಿಕಾರಿಗಳಾದ ಚೆಪ್ಪುಡೀರ ಧ್ಯಾನ್ ಸುಬ್ಬಯ್ಯ, ಎಂ.ಮAಜುಳ, ವರಲಕ್ಷಿö್ಮ, ಚಂದನ್ ಕಾಮತ್, ಸಪ್ತೇಶ್, ಅಂಕಿತ್ ಪೊನ್ನಪ್ಪ, ಓಮನ, ಶೋಭಿತ್, ನೂರೆರ ಧನ್ಯ, ಕಡೇಮಾಡ ಕುಸುಮ, ತೆರೆಸವಿಕ್ಟರ್ ಸೇರಿದಂತೆ ಸಮಿತಿಯ ಸದಸ್ಯರುಗಳು ಪಾಲ್ಗೊಂಡಿದ್ದರು. ಆಯುಷ್ ಪ್ರಾರ್ಥಿಸಿ ಮನೆಯಪಂಡ ಶೀಲಾ ಬೋಪಣ್ಣ ಸ್ವಾಗತಿಸಿ, ಶಿಕ್ಷಕಿ ಚಂದನ ಮಂಜುನಾಥ್ ನಿರೂಪಿಪಿ ವಂದಿಸಿದರು.

-ಹೆಚ್.ಕೆ.ಜಗದೀಶ್