ಮಡಿಕೇರಿ, ಅ. ೧೨: ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ವಿವಿಧ ಸ್ಥಾನಮಾನಗಳನ್ನು ನೀಡುವ ಮೂಲಕ ಪರಿಶಿಷ್ಟ ಸಮುದಾಯದ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯವೆಂದು ಕೊಡಗು ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿಎಂ ರವಿ ಮೊಗೇರ ಅಭಿಪ್ರಾಯಪಟ್ಟರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಎಸ್‌ಸಿ ಮೋರ್ಚಾದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ದೊಡ್ಡ ಸಂಖ್ಯೆಯಲ್ಲಿದ್ದು ಪರಿಶಿಷ್ಟರ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯವೆಂದರು. ಜಿಲ್ಲೆಯಲ್ಲಿ ಎಸ್.ಸಿ ಮೋರ್ಚಾವನ್ನು ದೊಡ್ಡ ಮಟ್ಟದಲ್ಲಿ ಸಂಘಟಿಸಿ ಎಲ್ಲಾ ಮಂಡಲಗಳÀನ್ನು ಬಲಿಷ್ಠ ಗೊಳಿಸಲಾಗುವುದು ಎಂದರು. ಪರಿಶಿಷ್ಟ ಸಮುದಾಯದವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಪಕ್ಷದಿಂದ ಸನ್ಮಾನಿಸಿ ಗೌರವಿಸುವುದು, ಸೇರಿದಂತೆ ಭಾರತದ ಪ್ರಧಾನ ಮಂತ್ರಿ ಮೋದಿಜಿಯವರ ೨೫ ವರ್ಷಗಳ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ವಿವಿಧ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಮಾಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಕೆ ಚಂದ್ರು, ಮಡಿಕೇರಿ ಗ್ರಾಮಾಂತರ ಎಸ್.ಸಿ. ಮೋರ್ಚಾದ ಅಧ್ಯಕ್ಷ ಹೀರಾ ಸುಬ್ಬಯ್ಯ, ವೀರಾಜಪೇಟೆ ಗ್ರಾಮಾಂತರ ಮಂಡಲ ಎಸ್.ಸಿ ಮೋರ್ಚಾದ ಅಧ್ಯಕ್ಷ ಅಭಿಜಿತ್, ಸೋಮವಾರಪೇಟೆ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಮಕೃಷ್ಣ, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಮುಕುಂದ, ಸೋಮವಾರಪೇಟೆ ಮಂಡಲ ಪ್ರಧಾನ ಹೂವಯ್ಯ, ಮಾಜಿ ಎಸ್.ಸಿ ಮೋರ್ಚಾದ ಅಧ್ಯಕ್ಷ ಹೆಚ್.ಬಿ ಕುಶಾಲಪ್ಪ, ಸೋಮವಾರಪೇಟೆ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಕೆಂಚ್ಚೆಶ್ವರ, ಸದಸ್ಯರಾದ ಹರೀಶ್, ಜನಾರ್ಧನ್, ದಿನೇಶ್ ಪೆಗ್ಗೊಳ್ಳಿ, ಮಧು, ಮಂಜು ಶಿವಪ್ಪ, ಜಯಪ್ರಕಾಶ್ ಸೇರಿದಂತೆ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.