ವೀರಾಜಪೇಟೆ, ಅ. ೧೨: ಬೆಟ್ಟಗೇರಿ ಗಾ.ಪಂ.ವ್ಯಾಪ್ತಿಯ ಕಾರಗುಂದ ಭಾಗದ ೧೫ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ತೊರೆದು, ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಶಾಸಕರ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.

ನೂತನ ಕಾರ್ಯಕರ್ತರಿಗೆ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ, ವಲಯ ಕಾಂಗ್ರೆಸ್ ಅಧ್ಯಕ್ಷ ಕೊಡಗನ ತೀರ್ಥ ಕುಮಾರ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರಾದ ಗೌರೀಶ್ ರೈ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ, ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಸಿರಾಜ್ ಪರವಂಡ ಹಾಗೂ ಇನ್ನಿತರ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.