ಸಿದ್ದಾಪುರ, ಅ. ೧೩: ಅಮ್ಮತ್ತಿ, ಒಂಟಿಯAಗಡಿ, ಕಣ್ಣಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಲಯಾಳಿ ಸಮಾಜದ ವತಿಯಿಂದ ೮ನೇ ವರ್ಷದ ಓಣಂ ಸಂಭ್ರಮದಿAದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್ ಪೊನ್ನಣ್ಣ, ಹಿಂದೂ ಮಲಯಾಳಿ ಸಮಾಜದವರು ನಾಡಿಗೆ ಸಾಂಸ್ಕೃತಿಕವಾಗಿ ಹಾಗೂ ಅನೇಕ ರಂಗಗಳಲ್ಲಿ ಬಹುದೊಡ್ಡ ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಲಯಾಳಿ ಸಮಾಜದವರು ತಮ್ಮದೇ ಆದ ಆಚರಣೆಗಳನ್ನು ಆಚರಿಸುತ್ತಿದ್ದಾರೆ. ಶಿಸ್ತು ಹಾಗೂ ವಿಶಿಷ್ಟ ಜೀವನ ಶೈಲಿಯಿಂದಾಗಿ ಸಮಾಜದ ಬೆಳವಣಿಗೆಗಾಗಿ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಓಣಂ ಆಚರಣೆ ಪೌರಾಣಿಕ ಹಾಗೂ ಆಧುನಿಕ ಮಿಶ್ರಣದೊಂದಿಗೆ ಜನರನ್ನು ಒಟ್ಟುಗೂಡಿಸುವದರೊಂದಿಗೆ ಸಮಾಜದಲ್ಲಿ ಒಗ್ಗಟ್ಟನ್ನು ಮೂಡಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿದರು. ಈ ಸಂದರ್ಭ ಮಲಯಾಳಿ ಸಮಾಜದ ಪ್ರತಿಭಾವಂತ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕಗಳಿಸಿದ ಮಕ್ಕಳನ್ನು ಗೌರವಿಸಲಾಯಿತು. ಫುಟ್ಬಾಲ್ ಪಂದ್ಯಾವಳಿಯ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದ ತಂಡಗಳಿಗೆ ಪ್ರಶಸ್ತಿ ನೀಡಲಾಯಿತು.
ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಚೋಕಂಡ ಸಂಜು ಸುಬ್ಬಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಲಯಾಳಿ ಸಮಾಜದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಗಣ್ಯರು ಹಾಜರಿದ್ದರು. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಸಹಭೋಜನ (ಓಣಂ ಸಧ್ಯಾ) ಏರ್ಪಡಿಸಲಾಗಿತ್ತು.