ನಾಪೋಕ್ಲು, ಅ. ೧೩: ಪವಿತ್ರ ಕಾವೇರಿ ತೀರ್ಥೋದ್ಭವದ ಧಾರ್ಮಿಕ ಆಚರಣೆಯು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಲಕಾವೇರಿಯ ಕಾವೇರಿ ಉಗಮ ಸ್ಥಾನ ಹಾಗೂ ಭಾಗಮಂಡಲದ ಶ್ರೀ ಭಗಂಡೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಕ್ತಾದಿಗಳಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಅಕ್ಟೋಬರ್ ೧೭ ರಂದು ರಾತ್ರಿ ೭:೫೦ ಗಂಟೆಗೆ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ಜರುಗಲಿದೆ.

ಶಾಸಕರು ಹಾಗೂ ಮುಖ್ಯಮಂತ್ರಿಯವರÀ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ನಿರ್ದೇಶನ ಮತ್ತು ಸೂಚನೆ ಮೇರೆಗೆ ಎಲ್ಲಾ ಕಾಮಗಾರಿಗಳು ಪ್ರಗತಿಯಲ್ಲಿವೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿರುವ ಮರಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿ ವಿಸ್ತಾರಗೊಳಿಸಲಾಗುತ್ತಿದೆ . ತಲಕಾವೇರಿಯಲ್ಲಿ ತೀರ್ಥೋದ್ಭವದ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳ ಸುಗಮ ಓಡಾಟಕ್ಕೆ ಅನುಕೂಲವಾಗುವಂತೆ ವಿಶೇಷ ಪಾದಚಾರಿ ಮಾರ್ಗಗಳನ್ನು ಸಿದ್ಧಪಡಿಸಲಾಗುತ್ತಿದೆ. ದೇವಸ್ಥಾನದ ಒಳಾಂಗಣದ ನೆಲಹಾಸು ಹಾಗೂ ನೂತನ ಹೊದಿಕೆಗಳನ್ನು ಅಳವಡಿಸುವ ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಮೂಲಕ ದೇವಸ್ಥಾನದ ಒಟ್ಟಾರೆ ಸೌಂದರ್ಯವನ್ನು ಹೆಚ್ಚಿಸುವ ಕೆಲಸಗಳು ಭರದಿಂದ ನಡೆಯುತ್ತಿವೆ.

ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಅಪರ ಜಿಲ್ಲಾಧಿಕಾರಿ ನಿರಂಜನ್ ಎಂ.ಎನ್. ಅವರು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಹಾಗೂ ಪಾರುಪತ್ತೇಗಾರ ಕೆ.ಪಿ ಪೊನ್ನಣ್ಣ ಅವರಿಗೆ ಸೂಕ್ತ ನಿರ್ದೇಶನ ಮತ್ತು ಸೂಚನೆ ನೀಡಿದರು.

ಈಗಾಗಲೇ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು ಮತ್ತು ಆಜ್ಞಾ ಮುಹೂರ್ತ ಧಾರ್ಮಿಕ ವಿಧಿವಿಧಾನಗಳು ನಡೆದಿವೆ. ತಾ. ೧೫ರ ಗುರುವಾರ ಮಧ್ಯಾಹ್ನ ೧೨-೩೫ ಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವ ಕಾರ್ಯ ನಡೆಯಲಿದೆ.