ಸುಂಟಿಕೊಪ್ಪ, ಅ. ೧೩: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ ೫೬ನೇ ವರ್ಷದ ಆಯುಧ ಪೂಜಾ ಸಮಾರಂಭವು ತಾ.೨೦ ರಂದು ವಾಹನ ಚಾಲಕರ ಸಂಘದ ಭವ್ಯ ವೇದಿಕೆಯಲ್ಲಿ ನಡೆಯಲಿದೆ.

ಸಮಾರಂಭದ ಉದ್ಘಾಟನೆಯನ್ನು ಕೊಡಗು ಜಿಲ್ಲಾಡಳಿತದ ಕಾನೂನು ಸಲಹೆಗಾರರಾದ ಎ ಲೋಕೇಶ್‌ಕುಮಾರ್ ನೆರವೇರಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್‌ಗೌಡ ಅವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಎಂ.ಪಿ ಅಪ್ಪಚ್ಚು ರಂಜನ್, ವಿಟ್ಲ ಮಾಜಿ ಶಾಸಕರಾದ ಕೆ.ಎಂ ಇಬ್ರಾಹಿಂ, ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅದ್ಯಕ್ಷ ವಿ.ಪಿ.ಶಶಿಧರ್, ಕೊಡಗು ಜಿ.ಪಂ.ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಜಿ.ಪಂ. ಮಾಜಿ ಸದಸ್ಯರುಗಳಾದ ಪಿ.ಎಂ.ಲತೀಫ್, ಬಿ.ಬಿ.ಭಾರತೀಶ್, ಗ್ರಾ.ಪಂ ಅಧ್ಯಕ್ಷರುಗಳಾದ ಪಿ.ಆರ್ ಸುನಿಲ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಹರಪ್ಪಳ್ಳಿ ರವೀಂದ್ರ, ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕರಾದ ದಿನೇಶ್ ಕುಮಾರ್, ಸುಂಟಿಕೊಪ್ಪ ಗ್ರಾ.ಪಂ.ಆಡಳಿತಾಧಿಕಾರಿ ಎಚ್.ಇ ರಾಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ ಲೋಕೇಶ್, ಆಟೋಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎ.ಎಂ ಶರೀಫ್, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ರೋಶನಿ ರಾಮಪುರಂ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಕೆದಕಲ್ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಸಂಜು ಪೊನ್ನಪ್ಪ ಪಟ್ಟೆಮನೆ, ಪ್ರಾ.ಕೃ.ಪ.ಸ.ಸಂ ಉಪಾಧ್ಯಕ್ಷ ಉದಯಕುಮಾರ್, ಗುತ್ತಿಗೆದಾರರಾದ ಮಂಜುನಾಥ್ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಚಲನÀಚಿತ್ರ ನಿರ್ದೇಶಕಿ ರಾಜ್ಯ ಪ್ರಶಸ್ತಿ ಪುರಸ್ಕೃತಾದ ರೋಶನಿ ರಾಮಪುರಂ ಅವರನ್ನು ಸನ್ಮಾನಿಸಲಾಗುವುದೆಂದು ಸಂಘದ ಅಧ್ಯಕ್ಷ ಕೆ.ವಿ.ಕಿಟ್ಟಣ್ಣ ರೈ ಅವರು ತಿಳಿಸಿದ್ದಾರೆ.

ಆಯುಧ ಪೂಜೆಗಾಗಿ ಸುಂಟಿಕೊಪ್ಪ ಪಟ್ಟಣವನ್ನು ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲು ಯುವ ಕಾಂಗ್ರೆಸ್ ಮುಖಂಡರಾದ ಪಿ.ಎಲ್.ಹರ್ಷದ್ ಪ್ರಾಯೋಜಕತ್ವ ನೀಡಿದ್ದಾರೆಂದು ಪ್ರಕಟಣೆ ತಿಳಿಸಿದೆ.