ಐಗೂರು, ಅ. ೧೩: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಯುವ ಮೋರ್ಚಾ ವತಿಯಿಂದ ಗರಗಂದೂರು ಬಿ ಗ್ರಾಮದ ಹೊಸತೋಟದಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿ ಬೂತ್ ಘಟಕದ ಅಧ್ಯಕ್ಷ ಉಲ್ಲಾಸ್ ಮಾತನಾಡಿ ಸ್ವಚ್ಛತೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿಯೊಬ್ಬರೂ ತಮ್ಮ ಮನೆ, ಗ್ರಾಮ ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಸಂಕಲ್ಪ ಮಾಡಬೇಕೆಂದರು.
ಕಾರ್ಯಕ್ರಮದ ಅಂಗವಾಗಿ ಹೊಸತೋಟ ಸರ್ಕಾರಿ ಶಾಲೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಸ್ವಚ್ಛತಾ ಕಾರ್ಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.