ಮಡಿಕೇರಿ, ಅ. ೧೩: ಪ್ರಸಕ್ತ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಆಗಿದೆ.
ಸ್ವಯಂ ಉದ್ಯೋಗ ನೇರಸಾಲ ಯೋಜನೆ : ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು, ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನಿಗಮದಿಂದ ನೇರಸಾಲ ಗರಿಷ್ಠ ವೆಚ್ಚ ರೂ. ೧ ಲಕ್ಷ, ಅದರಲ್ಲಿ ಶೇ. ೫೦ ಸಾಲ ಮತ್ತು ಶೇ. ೫೦ ಸಹಾಯಧನ (ಶೇ. ೪ ರಷ್ಟು ಬಡ್ಡಿ ದರ) ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ : (ಬ್ಯಾಂಕುಗಳ ಸಹಯೋಗದೊಂದಿಗೆ), ಹೈನುಗಾರಿಕೆ ಯೋಜನೆ ಘಟಕ ವೆಚ್ಚದ ಶೇ. ೫೦.ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. ೧.೨೫ ಲಕ್ಷ, ವ್ಯಾಪಾರ ಮತ್ತು ಇತರ ಉದ್ಯಮಗಳಿಗೆ ಘಟಕ ವೆಚ್ಚದ ಶೇ. ೭೦ ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. ೨ ಲಕ್ಷ. ಸ್ವಾವಲಂಬಿ ಸಾರಥಿ : ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಘಟಕ ವೆಚ್ಚದ ಶೇ. ೭೫ ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. ೪ ಲಕ್ಷ. ಪುಡ್ ಟ್ರಕ್ ಟ್ರೆöÊಲರ್/ಮೊಬೈಲ್ ಕಿಚನ್ ಪುಡ್ ಕಿಯೋಸ್ಕ್ ಉದ್ಧೇಶಕ್ಕೆ ಹಾಗೂ ಘಟಕ ವೆಚ್ಚದ ಶೇ. ೭೫ ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. ೪ ಲಕ್ಷ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು) : ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ ೧೦ ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ. ೫ ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ. ೨.೫೦ ಲಕ್ಷ ಸಹಾಯಧನ ಮತ್ತು ರೂ. ೨.೫೦ ಲಕ್ಷ ಸಾಲ (ಶೇ. ೪ ರಷ್ಟು ಬಡ್ಡಿ ದರ). ಗಂಗಾ ಕಲ್ಯಾಣ ಯೋಜನೆ : ೧.೫ ಎಕರೆಯಿಂದ ೫ ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯುದ್ಧೀಕರಣ ಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ. ೫.೫೦ ಲಕ್ಷ/ ರೂ. ೪.೫೦ ಲಕ್ಷ (ಇದರಲ್ಲಿ ರೂ. ೫೦ ಸಾವಿರ ಸಾಲ ಸೇರಿರುತ್ತದೆ.)
ಭೂ ಒಡೆತನ ಯೋಜನೆ : ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ ಒಂದು ಎಕರೆ ಭಾಗಾಯ್ತು ಅಥವಾ ಎರಡು ಎಕರೆ ಖುಷ್ಕಿ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ ರೂ. ೨೫ ಲಕ್ಷ ಸಹಾಯಧನ ಶೇ. ೫೦. ಸಾಲ ಶೇ. ೫೦ (ಶೇ. ೬ ರಷ್ಟು ಬಡ್ಡಿದರ). ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್ಸೈಟ್ ವಿಳಾಸ: hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್ಲೋಡ್ ಮಾಡಿ ಅರ್ಜಿಯನ್ನು ತಾ. ೧೭ ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ ೫೭೧೨೦೧ ದೂ.ಸಂ. ೮೦೫೦೮೫೪೦೬೧ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.