ಸಿದ್ದಾಪುರ, ಅ. ೧೩: ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಎಸ್.ಐ.ಆರ್ ಪ್ರಕ್ರಿಯೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಸಂಘಟನೆ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನೆಯಲ್ಲ್ಲಿ ಸಂಘಟನೆಯ ಡಿವೈಎಫ್‌ಐ ಸಂಘಟನೆಯ ಜಿಲ್ಲಾಧ್ಯಕ್ಷರಾದ ಜ್ಯೋತಿ ಕೃಷ್ಣ, ಕಾರ್ಯದರ್ಶಿ ಎ.ಹೆಚ್ ಶಾಧಿಕ್, ಜಿಲ್ಲಾ ಸದಸ್ಯ ರೋಷನ್, ಅನಿಲ್ ಕುಟ್ಟಪ್ಪ, ಇನ್ನಿತರರು ಹಾಜರಿದ್ದರು.