ಮಡಿಕೇರಿ, ಅ. ೧೩: ಮಡಿಕೇರಿ ನಗರದಲ್ಲಿ ದಸರಾ ಉತ್ಸವದ ಸಂಬAಧ ತಾ.೨೧ರಂದು ನಡೆಯಲಿರುವ ಶೋಭಾಯಾತ್ರೆಯಲ್ಲಿ ಸುಮಾರು ೧ ಲಕ್ಷ ಸಾರ್ವಜನಿಕರು ಪಾಲ್ಗೊಳ್ಳಲಿರುವ ಬಗ್ಗೆ ಹಾಗೂ ಗೋಣಿಕೊಪ್ಪದಲ್ಲಿ ನಡೆಯಲಿರುವ ದಸರಾ ಕಾರ್ಯಕ್ರಮಕ್ಕೆ ಸುಮಾರು ಇಪ್ಪತ್ತು ಸಾವಿರಕ್ಕೂ ಮೇಲ್ಪಟ್ಟು ಜನರು ಪಾಲ್ಗೊಳ್ಳುವ ಬಗ್ಗೆ ಮಾಹಿತಿ ಇದ್ದು, ತಾ.೨೧ ಹಾಗೂ ೨೨ ರಂದು ವಾಹನ ಸಂಚಾರದಲ್ಲಿ ಬದಲಾವಣೆ ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರ ಕೋರಿಕೆ ಮೇಲೆ ಸಂಚಾರದಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಆದೇಶಿಸಿದ್ದಾರೆ.
ತಾ. ೨೧ ರಂದು ಮಧ್ಯಾಹ್ನ ೧ ಗಂಟೆಯಿAದ ತಾ. ೨೨ ಬೆಳಿಗ್ಗೆ ೧೦ ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.
ತಾ.೨೧ ರಂದು ಮಧ್ಯಾಹ್ನ ೧ ಗಂಟೆಯಿAದ ತಾ. ೨೨ ಬೆಳಿಗ್ಗೆ ೧೦ ಗಂಟೆಯವರೆಗೆ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬಿಳಿಕೆರೆ, ಕೆ.ಆರ್. ನಗರ, ಹೊಳೆನರಸೀಪುರ, ಹಾಸನ ಸಕಲೇಶಪುರ ಮಾರ್ಗವಾಗಿ ಸಂಚರಿಸುವುದು.
ತಾ.೨೧ ರಂದು ಸಂಜೆ ೪ ಗಂಟೆಯಿAದ ತಾ.೨೨ರ ಬೆಳಿಗ್ಗೆ ೧೦ ಗಂಟೆವರೆಗೆ ಮಡಿಕೇರಿ ನಗರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ.