ಮೂರ್ನಾಡು, ಅ, ೧೪: ಮೂರ್ನಾಡು ಎಜುಕೇಶನ್ ಸೊಸೈ ಟಿಯ ಪದವಿ ಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಏಳು ದಿನಗಳ ಕಾಲ ಆಯೋಜಿಸಿರುವ ವಿಶೇಷ ವಾರ್ಷಿಕ ಶಿಬಿರಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಅವರು ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿದರು.

ಹಾಕತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿರುವ ಶಿಬಿರದ ಧ್ವಜಾರೋಹಣವನ್ನು ಕಾಲೇಜಿನ ಗೌರವ ಕಾರ್ಯದರ್ಶಿ ಪುದಿಯೊಕ್ಕಡ ಹರೀಶ್ ದೇವಯ್ಯ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಂದ್ರೀರ ತೇಜಸ್ ನಾಣಯ್ಯ ಮಾತನಾಡಿ, ಎನ್‌ಎಸ್‌ಎಸ್ ಶಿಬಿರದ ಮೂಲಕ ವಿದ್ಯಾರ್ಥಿಗಳು ಗುರಿಸಾಧಿಸುವ ಛಲ ಹಾಗೂ ವ್ಯಕ್ತಿತ್ವ ವಿಕಸನದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭ ಕೃಷಿಯ ಮಹತ್ವ ಹಾಗೂ ಕೃಷಿ ಕ್ಷೇತ್ರದ ಕುರಿತು ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೆರವಂಡ ಜಯ ಮುತ್ತಪ್ಪ ಮಾತನಾಡಿ, ವಿದ್ಯಾರ್ಥಿ ಗಳು ಸೇವಾ ಮನೋಭಾವವನ್ನು ಮೈಗೂಡಿಸಿ ಕೊಳ್ಳುವುದರೊಂದಿಗೆ ನಾಯಕತ್ವ ಗುಣಗಳನ್ನು ಬೆಳೆಸಿ ಕೊಳ್ಳಬೇಕು. ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವೇದಿಕೆಯಲ್ಲಿ ಜ್ಞಾನಜ್ಯೋತಿ ಸ್ವಸಹಾಯ ಸಂಘದ ಅಧ್ಯಕ್ಷೆ ಉಳುವಾರನ ಗೀತಾ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಹಾಕತ್ತೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪಿ.ಎಚ್. ರಶ್ಮಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕಿ ಸರೋಜಿನಿ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ಸ್ವಾಗತಿಸಿ, ಅನುರಾಧ ವಂದಿಸಿದರು.