ಮಡಿಕೇರಿ, ಅ. ೧೪: ಮತದಾನದ ಹಕ್ಕಿನ ರಕ್ಷಣೆ ಹಾಗೂ ಚುನಾವಣಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಪ್ರಜಾಪ್ರಭುತ್ವ ರಕ್ಷಣಾ ವೇದಿಕೆ ವತಿಯಿಂದ ದಲಿತ, ಆದಿವಾಸಿ, ಅಲ್ಪಸಂಖ್ಯಾತ ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ತಾ. ೧೫ ರಂದು (ಇಂದು) ಮಡಿಕೇರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ವೇದಿಕೆಯ ಸಂಚಾಲಕ ನಿರ್ವಾಣಪ್ಪ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರು ಕೇಂದ್ರದ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕಲು ಪೊಲೀಸ್ ಹಾಗೂ ಮಿಲಿಟರಿ ಪಡೆಗಳನ್ನು ಬಳಸಿಕೊಂಡು ಜನಸಾಮಾನ್ಯರು ಮತ್ತು ಯುವಜನರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ದೂರಿದರು.
ಮತದಾನದ ಹಕ್ಕಿನ ರಕ್ಷಣೆಗಾಗಿ ಕೊಡಗಿನಲ್ಲೂ ಹೋರಾಟ ನಡೆಯುತ್ತಿದ್ದು, ದೆಹಲಿಯ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಲಾಗುವುದು. ಮಡಿಕೇರಿಯ ಹಳೆಯ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ವೇದಿಕೆಯ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ, ಯುವಜನರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಖಂಡನೀಯ. ಸ್ವಾತಂತ್ರö್ಯ ನಂತರ ಇಂತಹ ಪರಿಸ್ಥಿತಿ ಹಿಂದೆAದೂ ಕಂಡಿಲ್ಲ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಯುವಜನರ ಉದ್ಯೋಗ, ವಸತಿ, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಗಮನಹರಿಸಬೇಕಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರು ಬೇರೆ ವಿಚಾರಗಳಲ್ಲಿ ತೊಡಗಿರುವುದು ಖಂಡನೀಯ ಎಂದು ಹೇಳಿದರು. ಕೊಡಗಿನಲ್ಲಿ ಫಾರಂ-೭ ಸಲ್ಲಿಕೆಗೆ ಸಂಬAಧಿಸಿದAತೆ ಎಫ್ಐಆರ್ ದಾಖಲಿಸಲು ವಿಳಂಬ ಮಾಡಲಾಗಿದೆ. ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಗತಿಪರ ಚಿಂತಕ ಹಮೀದ್ ಮೌಲವಿ, ವೇದಿಕೆಯ ಗೌರವಾಧ್ಯಕ್ಷ ಮೊಹಮ್ಮದ್ ಹನೀಫ್, ಸದಸ್ಯರಾದ ಪ್ರೇಮ್ ಕುಮಾರ್, ಎಚ್.ಎಲ್ ದಿವಾಕರ್ ಹಾಜರಿದ್ದರು.