ಕುಶಾಲನಗರ, ಅ. ೧೪: ಕುಶಾಲನಗರ - ಮೈಸೂರು ರಸ್ತೆಯಿಂದ ಸಂತ ಸೆಬಾಸ್ಟಿಯನ್ ಚರ್ಚ್ ಕಡೆಗೆ ತೆರಳುವ ರಸ್ತೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಲೋಕಾರ್ಪಣೆಗೊಳಿಸಿದರು.

ಸುಮಾರು ರೂ. ೧೫ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾಂಕ್ರಿಟ್ ರಸ್ತೆ ಪಟ್ಟಣದ ಬಡಾವಣೆಗಳಿಗೆ ಸಂಪರ್ಕ ರಸ್ತೆಯಾಗಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭ ಸಂತ ಸೆಬಾಸ್ಟಿಯನ್ ದೇವಾಲಯ ದಲ್ಲಿ ಸರಳ ಕಾರ್ಯಕ್ರಮದಲ್ಲಿ ಧರ್ಮ ಗುರುಗಳಾದ ಫಾ. ಜ್ಞಾನ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ಪಟ್ಟಣದ ವಿವಿಧ ಬಡಾವಣೆಗಳ ಸಂಪರ್ಕ ರಸ್ತೆಯನ್ನು ಅಭಿವೃದ್ಧಿ ಗೊಳಿಸುವ ಕಾಮಗಾರಿ ನಡೆದಿದೆ. ಪಕ್ಷ ಬೇಧ ಮರೆತು ಪಟ್ಟಣದ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದರು.

ಈ ಸಂದರ್ಭ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕಾಂಗ್ರೆಸ್ ನಗರ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ ಗುಂಡೂರಾವ್, ಚರ್ಚ್ ಸಲಹಾ ಸಮಿತಿ ಪ್ರಮುಖರಾದ ಹ್ಯೂಬರ್ಟ್, ಫಿಲಿಪ್ ವಾಸ್, ಎನ್.ಡಿ. ಜೋಸೆಫ್, ಕೃಜ್ವೆಲ್ ಕೋಟ್ಸ್, ಜೇಮ್ಸ್ ಪಿಂಟೋ, ಸಲಿನಾ ಡಿಕುನ್ನ, ರೋಷನ್ ಮತ್ತಿತರರು ಇದ್ದರು.