ಸಿದ್ದಾಪುರ, ಅ.೧೪: ವಾಹನ ಚಾಲಕರ ಮಜ್ದೂರ್ ಸಂಘ ವತಿಯಿಂದ ತಾ.೨೦ರಂದು ಸಿದ್ದಾಪುರ ಬಸ್ ನಿಲ್ದಾಣದಲ್ಲಿ ೩೩ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೂದನ ಸತೀಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೯ ಗಂಟೆಗೆ ಸಂಘದ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಬೆಳಿಗ್ಗೆ ೯.೩೦ಕ್ಕೆ ಕಾಫಿ ಬೆಳೆಗಾರ ಎ.ಸಿ. ಸುಬ್ಬಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಸಾಮೂಹಿಕ ಆಯುಧ ಪೂಜೆ ನಡೆಯಲಿದೆ ಎಂದು ಹೇಳಿದರು.
ನಂತರ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮಕ್ಕಳ ಆಟೋಟ ಸ್ಪರ್ಧೆಗೆ ಚಾಲನೆ ನೀಡಲಿದ್ದು, ರಸ್ತೆ ಓಟದ ಸ್ಪರ್ಧೆಯನ್ನು ಉದ್ಯಮಿ ವೆಂಕಪ್ಪ ರೈ ಉದ್ಘಾಟಿಸಲಿದ್ದಾರೆ. ಪುರುಷರು ಮತ್ತು ಮಹಿಳೆಯರಿಗಾಗಿ ಸೈಕಲ್ ನಿಧಾನಗತಿ ಸ್ಪರ್ಧೆ, ಮಡಿಕೆ ಹೊಡೆಯುವ ಸ್ಪರ್ಧೆ ಹಾಗೂ ಸಂಗೀತ ಕುರ್ಚಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪೂರ್ವಾಹ್ನ ೧೧ ಗಂಟೆಗೆ ಜಿಲ್ಲಾ ಮಟ್ಟದ ನೃತ್ಯ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಂತರ ವಿವಿಧ ಸ್ಪರ್ಧೆಗಳ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಂಘದ ನಿರ್ದೇಶಕ ಜಿಮ್ಮಿ ಸೀಕ್ವೆರ ಮಾತನಾಡಿ, ಅಂದು ಸಂಜೆ ೪.೩೦ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಆಯುಧ ಪೂಜಾ ಉತ್ಸವ ಸಮಿತಿಯ ಅಧ್ಯಕ್ಷ ಪಿ.ಕೆ. ದಾಸನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಸಮಾಜ ಸೇವಕ ಎಡಿಕೇರಿ ಪ್ರಸನ್ನ, ಕೊಡಗು ಜಿಲ್ಲಾ ಎಸ್ಎನ್ಡಿಪಿ ಯೂನಿಯನ್ ಅಧ್ಯಕ್ಷ ವಿ.ಕೆ. ಲೋಕೇಶ್, ಸಂಘದ ಕಾನೂನು ಸಲಹೆಗಾರ ರತ್ನಾಕರ್ ಶೆಟ್ಟಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಸAಜೆ ೬.೩೦ಕ್ಕೆ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಅಲಂಕಾರ ಸ್ಪರ್ಧೆ ಹಾಗೂ ಅಂಗಡಿ ಮುಂಗಟ್ಟುಗಳ ಅಲಂಕಾರ ಸ್ಪರ್ಧೆ ನಡೆಯಲಿದೆ. ರಾತ್ರಿ ಕೇರಳದ ರಸಮಂಜರಿ ತಂಡದಿAದ ಆರ್ಕೆಸ್ಟಾç ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಆಸಕ್ತರು ಸಂಘದ ಪದಾಧಿಕಾರಿಗಳನ್ನು ಮೊಬೈಲ್ ಸಂಖ್ಯೆ ೯೯೦೨೮೬೦೪೬೪ ಅಥವಾ ೮೯೦೪೨೭೯೭೨೭ ಮೂಲಕ ಸಂಪರ್ಕಿಸುವAತೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಅನಿಶ್ ಕೆ.ಎಂ., ಉತ್ಸವ ಸಮಿತಿಯ ಅಧ್ಯಕ್ಷ ಪಿ.ಕೆ. ದಾಸನ್, ಸದಸ್ಯರಾದ ರವಿ ಹಾಗೂ ಪಾಂಡ್ಯನ್ ಉಪಸ್ಥಿತರಿದ್ದರು.