ಸಿದ್ದಾಪುರ, ಅ. ೧೫: ಯುವಕನೋರ್ವ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ಗುರುವಾರ ನಡೆದಿದೆ. ಸೋಮವಾರಪೇಟೆ ನಿವಾಸಿ ಗೌತಮ್ (೨೩) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಕರಡಿಗೋಡು ಗ್ರಾಮದ ಖಾಸಗಿ ರೆಸಾರ್ಟ್ನಲ್ಲಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಗೌತಮ್, ಗುರುವಾರ ವಿಷಕಾರಿ ಪದಾರ್ಥ ಸೇವಿಸಿದ್ದಾನೆ ಎನ್ನಲಾಗಿದೆ.
ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಆತನನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬAಧಿಸಿದAತೆ ಸಿದ್ದಾಪುರ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕ ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದುಬಂದಿಲ್ಲ.