ಕೂಡಿಗೆ, ಅ. ೧೫: ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಆಡಳಿತಾಧಿಕಾರಿಗಳಿಗೆ ಮೂರು ದಿನಗಳ ಕಾಲ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಸಂಬAಧಿಸಿದ ತರಬೇತಿ ಕಾರ್ಯಗಾರವು ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆರಂಭಗೊAಡಿದೆ.

ತರಬೇತಿ ಕಾರ್ಯಗಾರಕ್ಕೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಬ್ದುಲ್ ನಬಿನವರು ಚಾಲನೆ ನೀಡಿದರು.

ತರಬೇತಿಯು ಎಸ್.ಐ.ಆರ್.ಡಿ ಯೋಜನೆಯಡಿ ಯಲ್ಲಿ ಮೈಸೂರು ವಿಭಾಗದ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಆಡಳಿತಾಧಿಕಾರಿಗಳು ಇದ್ದರು.