ಮಡಿಕೇರಿ, ಅ. ೧೫: ಕೂರ್ಗ್ ಹೊಟೇಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ (ಕೊಹೆರ) ವತಿಯಿಂದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಕೊಡಗಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ, ರಸ್ತೆಗಳ ಅಭಿವೃದ್ಧಿ ಹಾಗೂ ಇತರ ವಿಷಯಗಳ ಬಗ್ಗೆ ಚರ್ಚಿಸಿ ಸ್ಪಂದಿಸುವAತೆ ಮನವಿ ಮಾಡಲಾಯಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಪ್ರವಾಸೋದ್ಯಮ ಹಾಗೂ ಅದಕ್ಕೆ ಸಂಬAಧಿಸಿದ ಇತರ ಕ್ಷೇತ್ರಗಳ ಬೆಳವಣಿಗೆಗೆ ಪ್ರಯತ್ನಿಸುವುದಾಗಿ ಭರವಸೆ ಇತ್ತರು. ಈ ಸಂದರ್ಭ ಕೊಹೆರ ಪದಾಧಿಕಾರಿಗಳು ಹಾಜರಿದ್ದರು