ಕೂಡಿಗೆ, ಅ. ೧೫: ಕೂಡಿಗೆ ಯೂತ್ ಫ್ರೆಂಡ್ಸ್ ಅಸೋಸಿಯೇಷನ್ ವತಿಯಿಂದ ಡಿಸೆಂಬರ್ ೧೨ ಮತ್ತು ೧೩ ರಂದು ಅಂತರರಾಜ್ಯ ಮುಕ್ತ ವಾಲಿಬಾಲ್ ಪಂದ್ಯಾವಳಿ ನಡೆಸುವ ವಿಷಯಕ್ಕೆ ಸಂಬAಧಿಸಿದAತೆ ಅಸೋಸಿಯೇಷನ್ ಅಧ್ಯಕ್ಷ ಕೆ.ಎ. ಪೀಟರ್ ನೇತೃತ್ವದಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಕೆ.ಎ. ಪೀಟರ್ ಯುವಕರಿಗೆ ಕ್ರೀಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಇಂತಹ ಕ್ರೀಡಾಕೂಟದ ಮೂಲಕ ಸಾಧ್ಯವಾಗುವುದು. ಇದರ ಯಶಸ್ಸಿಗೆ ಎಲ್ಲರೂ ಸಹಕಾರ ನೀಡುವಂತೆ ಕೋರಿದರು.
ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಈ ಸಂದರ್ಭ ಯೂತ್ ಫ್ರೆಂಡ್ಸ್ ಅಸೋಸಿಯೇಷನ್ ಅಧ್ಯಕ್ಷ ಕೆ.ಎ. ಪೀಟರ್, ಉಪಾಧ್ಯಕ್ಷ ಟಿ.ಪಿ. ಹಮೀದ್, ಕಾರ್ಯದರ್ಶಿ ಶಿವಕುಮಾರ್, ಖಜಾಂಚಿ ಸನ್ನಿ, ಗ್ರಾಮ ಪಂಚಾಯಿತಿ ಸದಸ್ಯರುಗಳು, ರಾಜ್ಯ ಲ್ಯಾಂಪ್ ಮಹಾಮಂಡಳದ ಅಧ್ಯಕ್ಷ ಎಸ್.ಆರ್. ಅರುಣ್ರಾವ್, ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ನ ನಿರ್ದೇಶಕ ಎಸ್. ಆರ್. ಸುನಿಲ್ ರಾವ್ ಸೇರಿದಂತೆ ಅಸೋಸಿಯೇಷನ್ ಸದಸ್ಯರು ಹಾಗೂ ವಿವಿಧ ಘಟಕದ ಪದಾಧಿಕಾರಿಗಳು, ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.