ಸಿದ್ದಾಪುರ, ಆ. ೧೫: ಟಿಂಬರ್ ಕೆಲಸ ಮಾಡುತ್ತಿದ್ದ ವೇಳೆ ಮರದ ದಿಮ್ಮಿಯೊಂದು ತಲೆಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಅಭ್ಯತ್‌ಮಂಗಲ ಗ್ರಾಮದಲ್ಲಿ ಗುರುವಾರ ನಡೆದಿದೆ.

ಸಿದ್ದಾಪುರ ಸಮೀಪದ ಘಟ್ಟದಳ್ಳ ನಿವಾಸಿ ಅನೀಶ್ (೩೯) ಮೃತ ದುರ್ದೈವಿ. ಅನೀಶ್ ಅವರು ಅಭ್ಯತ್‌ಮಂಗಲ ಗ್ರಾಮದ ಖಾಸಗಿ ಕಾಫಿ ತೋಟವೊಂದರಲ್ಲಿ ಟಿಂಬರ್ ಕೆಲಸ ಮಾಡುತ್ತಿದ್ದರು. ತೋಟದಿಂದ ಮರದ ದಿಮ್ಮಿಗಳನ್ನು೪ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ರಸ್ತೆ ಬದಿಗೆ ಸಾಗಿಸುತ್ತಿದ್ದ ಸಂದರ್ಭದಲ್ಲಿ ದಿಮ್ಮಿಯೊಂದು ಏಕಾಏಕಿ ಅನೀಶ್ ಅವರ ತಲೆಗೆ ಬಿದ್ದಿದೆ.

ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನೀಶ್ ಅವರನ್ನು ಕೂಡಲೇ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಮೃತ ಅನೀಶ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಘಟನೆಗೆ ಸಂಬAಧಿಸಿದAತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚೆಟ್ಟಳ್ಳಿ ಉಪಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.