ಕುಶಾಲನಗರ, ಅ. ೧೫: ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕುಶಾಲನಗರ ಬಿಜೆಪಿ ಪ್ರಮುಖರು ಆರೋಪಿಸಿದರು.

ಸರಕಾರದ ಕಾರ್ಯಕ್ರಮಕ್ಕೆ ಕೇವಲ ಕಾಂಗ್ರೆಸ್ ಮುಖಂಡರಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಈ ಮೂಲಕ ಕೆಲವರ ಓಲೈಕೆಯಲ್ಲಿ ನಿರತರಾಗಿದ್ದಾರೆ ಎಂದು ಮುಖ್ಯಾಧಿಕಾರಿ ಗಿರೀಶ್ ಅವರನ್ನು ಪುರಸಭೆ ಕಚೇರಿಯಲ್ಲಿ ತರಾಟೆಗೆ ತೆಗೆದುಕೊಳ್ಳಲಾಯಿತು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ಕೆ.ಜಿ. ಮನು ಪುರಸಭೆ ಸಭಾಂಗಣವನ್ನು ಕಾಂಗ್ರೆಸಿಗರ ಕಾರ್ಯಕ್ರಮಗಳಿಗೆ ನೀಡಲಾಗಿದೆ. ಸಭೆಗಳು, ಕಾರ್ಯಕ್ರಮಗಳಿಗೆ ಕೇವಲ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಮಾಜಿ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನಿಸುವ ಅಭ್ಯಾಸ ರೂಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭ ನಗರ ಬಿಜೆಪಿ ಅಧ್ಯಕ್ಷ ಎಂ.ಎA ಚರಣ್, ಪ್ರಮುಖರಾದ ಎಂ.ಡಿ. ಕೃಷ್ಣಪ್ಪ, ಸುಮನ್, ಚಂದ್ರಶೇಖರ್ ಹೇರೂರು, ಭಾಸ್ಕರ್ ನಾಯಕ್, ಆಸಿಫ್, ಮಂಜು, ಪ್ರಶಾಂತ್, ಅವಿನಾಶ್, ರಾಮನಾಥನ್, ಪ್ರವೀಣ್, ಅಣ್ಣಯ್ಯ, ಬಾಲಾಜಿ, ಚಂದ್ರಶೇಖರ್, ಚಂದ್ರು, ವಸಂತ್ ಮತ್ತಿತರರು ಇದ್ದರು.