ಸಿದ್ದಾಪುರ, ಅ. ೧೫: ಕರಡಿಗೋಡಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಹಾನಿಯಾಗಿದ್ದ ಮನೆಗೆ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಅವರು ಭೇಟಿ ನೀಡಿ ಮನೆಯ ಮಾಲೀಕ ಷಣ್ಮುಗಂ ಅವರಿಗೆ ಧೈರ್ಯ ತುಂಬಿದರು. ಬಳಿಕ ಘಟನೆಗೆ ಸಂಬAಧಿಸಿದ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಮಾತನಾಡಿದ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರಕೊಡಿಸುವ ಬಗ್ಗೆ ತಿಳಿಸಿದರು. ಅಲ್ಲದೆ ಷಣ್ಮುಗಂ ಅವರಿಗೆ ವೈಯಕ್ತಿಕವಾಗಿ ಸಹಾಯಧನ ನೀಡಿದರು. ಸ್ಥಳದಿಂದಲೇ ವೀರಾಜಪೇಟೆ ತಾಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿಯನ್ನು ಕಲೆ ಹಾಕಿ ಷಣ್ಮುಗಂ ಅವರ ಕುಟುಂಬಕ್ಕೆ ಸಹಕಾರ ನೀಡುವ ಮೂಲಕ ಸಮಸ್ಯೆಗೆ ಸ್ಪಂದಿಸುವAತೆ ತಿಳಿಸಿದರು. ಈ ಸಂದರ್ಭ ಬಿಜೆಪಿ ವೀರಾಜಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರುಂಬಯ್ಯ, ಸಿದ್ದಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೀನಾ ತುಳಸಿ, ಮಾಜಿ ಉಪಾಧ್ಯಕ್ಷ ಮಹೇಶ್, ಸಿದ್ದಾಪುರ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ರೂಪೇಶ್ ಇನ್ನಿತರರು ಹಾಜರಿದ್ದರು.