ಚೆಯ್ಯಂಡಾಣೆ, ಅ. ೧೫: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಾದ ಚೇಲಾವರ ಜಲಪಾತ ಹಾಗೂ ಕಬ್ಬೆ ಬೆಟ್ಟಗಳಿಗೆ ಆಗಮಿಸುವ ಪ್ರವಾಸಿಗರಿಂದ ಶುಲ್ಕ ವಸೂಲಿ ಮಾಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಟೋಲ್ ಗೇಟ್‌ನ ಉದ್ಘಾಟನಾ ಕಾರ್ಯಕ್ರಮ ಗುರುವಾರ ನಡೆಯಿತು. ಚೇಲಾವರ ಗ್ರಾಮದ ಪೊನ್ನೋಲ ಶಾಲೆಯ ಸಮೀಪದ ಬಸ್ ನಿಲ್ದಾಣದ ಮುಂಭಾಗದಲ್ಲಿ ಸ್ಥಾಪಿಸಲಾಗಿರುವ ಟೋಲ್ ಗೇಟ್ ಅನ್ನು ನಡಿಕೇರಿಯಂಡ ಚಿಣ್ಣಪ್ಪ ಹಾಗೂ ಕುಟುಂಬಸ್ಥರು ಉದ್ಘಾಟಿಸಿದರು.

ಕಾರ್ಯಕ್ರಮದ ಅಂಗವಾಗಿ ಅರ್ಚಕರಾದ ಕೀರ್ತೆಶ್ ನೇತೃತ್ವ ದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿತು.

ಈ ಸಂದರ್ಭ ನರಿಯಂದಡ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರಾದ ಕೋಡಿರ ವಿನೋದ್ ನಾಣಯ್ಯ, ಮಾಜಿ ಸದಸ್ಯ ಮುಂಡ್ಯೋಳAಡ ಪ್ರವೀಣ್ ಈರಪ್ಪ, ಮಂಜುಳಾ, ನರಿಯಂದಡ ಗ್ರಾಮ ಪಂ ಚಾಯಿತಿ ಮಾಜಿ ಸದಸ್ಯರುಗಳು, ಪೊನ್ನೋಲ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಹಾಜರಿದ್ದರು.