ಮಡಿಕೇರಿ, ಅ. ೧೬: ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಮಂಗಲ ಜೆ.ಸಿ. ಶಾಲೆಯ ವಿದ್ಯಾರ್ಥಿ ವೈಷ್ಣವ್ ಪಿ.ಎಸ್. ಪ್ರಥಮ ಸ್ಥಾನ ಪಡೆದಿದ್ದಾನೆ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಇದೀಗ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.