ಮಡಿಕೇರಿ, ಅ. ೧೬: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿಯ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಇಟಿಣeಡಿಠಿಡಿeಟಿueಡಿshiಠಿ ಠಿಡಿogಡಿಚಿmme (ಇP) ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣದಲ್ಲಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ.

ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ ೩ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿ ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.

ಅರ್ಜಿ ಸಲ್ಲಿಸುವವರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು ೨೦ ರಿಂದ ೪೫ ವರ್ಷದೊಳಗಿರಬೇಕು. ಅರ್ಜಿದಾರರು ೧೦ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಲಘು ವಾಹನ ಚಾಲನಾ ಪರವಾನಗಿ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ. ೨ ಲಕ್ಷ ಮೀರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ ರೂ. ೧.೫೦ ಲಕ್ಷ ಮೀರಬಾರದು. ಅರ್ಜಿದಾರರು ಕೊಡಗು ಜಿಲ್ಲೆಯ ನಿವಾಸಿಯಾಗಿರಬೇಕು. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆಯಲ್ಲಿ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಜಿಲ್ಲಾಮಟ್ಟದ ಪ್ರವಾಸೋದ್ಯಮ ಕಚೇರಿಯಿಂದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇತ್ತೀಚಿನ ಭಾವಚಿತ್ರದೊಂದಿಗೆ ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು. ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಜಾತಿ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ. ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿ. ಖಾಯಂ ಲಘ ವಾಹನ ಚಾಲನಾ ಪರವಾನಗಿ ಪತ್ರದ ಪ್ರತಿ. ವಿದ್ಯಾರ್ಹತೆಯ ಬಗ್ಗೆ ಕನಿಷ್ಟ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ. ಅರ್ಜಿದಾರನು ಯಾವುದೇ ಸರ್ಕಾರಿ ಇಲಾಖೆ/ ನಿಗಮ/ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರದ ಬಗ್ಗೆ ಸ್ವಯಂ ಪ್ರಮಾಣಿಕರಿಸಿ, ರೂ. ೫೦ ರ ಬೆಲೆಯ ಛಾಪಾಕಾಗದದಲ್ಲಿ ನಮೂನೆ-೩ರಲ್ಲಿ ಪ್ರಮಾಣ ಪತ್ರವನ್ನು ಸಲ್ಲಿಸುವುದು. ಅರ್ಜಿದಾರನು ಮೇಲಿನ ಎಲ್ಲಾ ದಾಖಲಾತಿ ಸ್ವಯಂ ದೃಢೀಕರಿಸಿ ಸಲ್ಲಿಸತಕ್ಕದ್ದು.

ತರಬೇತಿಯನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಾಲಾವಕಾಶವನ್ನು ತಾ. ೨೩ ರವರೆಗೆ ವಿಸ್ತರಿಸಲಾಗಿದೆ. ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಗಳಲ್ಲಿ ತಾ. ೨೩ ರ ಸಂಜೆ ೫ ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-೫೭೧೨೦೧ ದೂರವಾಣಿ ಸಂಖ್ಯೆ: ೦೮೨೭೨-೨೦೦೫೧೯ ಅಥವಾ ಇ-ಮೇಲ್ ಜಜಞoಜಚಿguಣouಡಿism@gmಚಿiಟ.ಛಿom ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಶಶಿಧರ ತಿಳಿಸಿದ್ದಾರೆ.