ಮಡಿಕೇರಿ, ಅ. ೧೬: ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರು ತಲಕಾವೇರಿಗೆ ಭೇಟಿ ನೀಡಿ ಕಾವೇರಿ ಪವಿತ್ರ ತೀರ್ಥೋದ್ಭವ ಜಾತ್ರೆ ಸಿದ್ಧತೆ ಬಗ್ಗೆ ಪರಿಶೀಲಿಸಿದರು.

ತಾಯಿ ಕಾವೇರಿ ಮಾತೆ ಪವಿತ್ರ ತೀರ್ಥೋದ್ಭವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿ ಸಲಿದ್ದು, ಬ್ಯಾರಿಕೇಡ್ ನಿರ್ಮಾಣ, ಬೆಳಕಿನ ವ್ಯವಸ್ಥೆ, ಹೂವಿನ ಅಲಂಕಾರ, ಮೂಲ ಸೌಲಭ್ಯಗಳು ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ, ಗೀತಾ ಗಾಯನ ಕಾರ್ಯಕ್ರಮಕ್ಕೆ ಪ್ರತ್ಯೇಕ ವೇದಿಕೆ ನಿರ್ಮಾಣ, ಪ್ರಸಾದ ವಿತರಣಾ ಕೊಠಡಿ ಹೀಗೆ ಹಲವು ಸಿದ್ಧತೆ ಪರಿಶೀಲಿಸಿದರು.

ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಭಿಷೇಕ್, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕÀ ರಾಮಚಂದ್ರ ದರ್ಶನ, ಡಿವೈಎಸ್‌ಪಿ ಸೂರಜ್, ಐ.ಪಿ ಮೇದಪ್ಪ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಿರೀಶ್, ಪಂಚಾಯತ್ ರಾಜ್ ಇಂಜಿನಿಯರ್ ಜಿ.ಎಚ್. ನಾಯಕ್, ಜಯಣ್ಣ, ತಾ.ಪಂ.ಇಒ ಶೇಖರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಇತರರು ಇದ್ದರು.