ನಾಪೋಕ್ಲು, ಅ. ೧೬: ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಕ್ಕ ಗ್ರಾಮಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಗಳ ರಾಜಕೀಯ ಕಾರ್ಯದರ್ಶಿಗಳಾದ ಎ.ಎಸ್. ಪೊನ್ನಣ್ಣ ಅವರು ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆ ಆಲಿಸಿದರು.
ಬಕ್ಕದ ಸ್ಥಳೀಯರು ಈ ಹಿಂದೆ ತಮ್ಮ ಊರಿಗೆ ಸಮುದಾಯ ಭವನದ ಅಗತ್ಯತೆಯ ಕುರಿತು ಶಾಸಕರ ಗಮನಕ್ಕೆ ತಂದಿದ್ದರು. ಈ ಭರವಸೆಯಂತೆ ಗ್ರಾಮಕ್ಕೆ ಆಗಮಿಸಿದ ಶಾಸಕರು, ಸಮುದಾಯ ಭವನ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಸ್ಥಳೀಯರೊಂದಿಗೆ ಸಾರ್ವಜನಿಕ ಸಭೆ ನಡೆಸಿ ಚರ್ಚಿಸಿದರು. ಸಮುದಾಯ ಭವನ ನಿರ್ಮಾಣಕ್ಕೆ ಸಂಬAಧಿಸಿದAತೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ವಿವಿಧ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದ ಶಾಸಕರು, ಗ್ರಾಮಸ್ಥರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಬಕ್ಕದ ಸ್ಥಳೀಯರು ಹಾಗೂ ಮುಖಂಡರು ಶಾಸಕರಾದ ಎ. ಎಸ್. ಪೊನ್ನಣ್ಣ ಅವರನ್ನು ಗೌರವಿಸಿ ಸನ್ಮಾನಿಸಿದರು. ಮಡಿಕೇರಿ ನಗರಸಭೆಯ ಅಭಿಯಂತರ ಹೇಮಂತ್ ಕುಮಾರ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಕೊಡಗನ ತೀರ್ಥ ಕುಮಾರ್, ಗೌರೀಶ್, ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.