ಮಡಿಕೇರಿ, ಅ. ೧೬: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೦೨ ರ ನವೆಂಬರ್ ೪ ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೮೯೪ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೮೬೦ ಪ್ರಕರಣಗಳು ಇತ್ಯರ್ಥಗೊಂಡಿದೆ. ೨೦೨೬-೨೭ ನೇ ಆರ್ಥಿಕ ಸಾಲಿನಲ್ಲಿ ೧೩೯ ಪ್ರಕರಣಗಳು ದಾಖಲಾಗಿ, ೧೧೩ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ ೩೪ ಪ್ರಕರಣಗಳು ಇತ್ಯರ್ಥದ ಹಂತದಲ್ಲಿದೆ.
ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೫.೨೫ ಲಕ್ಷ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೬-೨೭ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ.