ಮಡಿಕೇರಿ, ಅ. ೧೭: ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಸಹಯೋಗದಲ್ಲಿ ಕೊಡಗು ಜಾನಪದ ಪರಿಷತ್ ವತಿಯಿಂದ ನಡೆಯುವ ೬ನೇ ವರ್ಷದ ಜಾನಪದ ದಸರಾ ತಾ. ೧೮ ರಂದು (ಇಂದು) ನಡೆಯಲಿದೆ.

ಬೆಳಿಗ್ಗೆ ೯.೩೦ ಗಂಟೆಗೆ ನಗರದ ಖಾಸಗಿ ಬಸ್ ನಿಲ್ದಾಣದಿಂದ ಕಲಾ ಜಾಥಾ ಹೊರಡಲಿದ್ದು, ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ, ಕರಡಿ ಮಜಲು, ರಂಗ ಕುಣಿತ, ಜಾನಪದ ಜಾಗೃತಿ ನಾಟಕ, ಆದಿವಾಸಿ ನೃತ್ಯ ಪ್ರದರ್ಶನ ಇರಲಿದೆ. ಬೆಳಿಗ್ಗೆ ೧೦ ಗಂಟೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಜಾನಪದ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದೆ.