ಮಡಿಕೇರಿ, ಅ. ೧೭: ವಿಜಯದಶಮಿ ದಿನ ಶೋಭಾ ಯಾತ್ರೆ ನಡೆಸುವ ದಶಮಂಟಪಗಳಲ್ಲಿ ಡಿಜೆ ಅಳವಡಿಸುವ ವಿಚಾರದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬAಧಿಸಿದAತೆ ಮುಂದಿನ ವಿಚಾರಣೆಯನ್ನು ನವೆಂಬರ್ ೧೬ಕ್ಕೆ ಮುಂದೂಡಲಾಗಿದೆ

ಜಿಲ್ಲಾ ಆಡಳಿತಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಆರೋಪಿಸಿ ದಶಮಂಟಪ ಸಮಿತಿಯ ಅಧ್ಯಕ್ಷ ಪಾಂಡಿರ ಪೂಣಚ್ಚ ಅವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸ್ವೀಕರಿಸಿದ್ದ ನ್ಯಾಯಾಧೀಶರು ಈ ಬಗ್ಗೆ ಜಿಲ್ಲಾಧಿಕಾರಿಗಳೇ ಆದೇಶ ಹೊರಡಿಸಿ ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಸೂಚಿಸಿದ್ದರು. ಇಂದು ಅರ್ಜಿ ವಿಚಾರಣೆ ಬಂದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ ಎಂದು ಅರ್ಜಿದಾರರು ಹೇಳಿದಾಗ ಆಕ್ಷೇಪ ವ್ಯಕ್ತಪಡಿಸಿದ ಹಿರಿಯ ವಕೀಲ ಅಮೃತೇಶ್ ಅವರು ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ವರದಿ ಸಲ್ಲಿಸಿರುವುದಾಗಿ ನ್ಯಾಯಾಧೀಶರ ಗಮನಕ್ಕೆ ತಂದರು. ಸುಪ್ರೀಂ ಕೋರ್ಟ್ ಆದೇಶದ ಅನ್ವಯ ದಶಮಂಟಪಗಳು ಡಿಜೆ ಮತ್ತು ಲೇಸರ್ ಲೈಟ್‌ಗೆ ಸಂಬAಧಿಸಿದAತೆ ಕಾನೂನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಅದನ್ನು ಪಾಲಿಸದಿದ್ದಲ್ಲಿ ನ್ಯಾಯಾಲಯದಿಂದಲೇ ಅರ್ಜಿ ಸಲ್ಲಿಸುವುದಾಗಿ ಅಮೃತೇಶ್ ನ್ಯಾಯಾಲಯದ ಗಮನಕ್ಕೆ ತಂದರು. ಈ ಬಗ್ಗೆ ವಿಚಾರಣೆಯನ್ನು ನವೆಂಬರ್ ೧೬ ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶಿಸಿದರು.