ಕೊಲ್ಕತ್ತಾ, ಅ. ೧೭: ಕೋಲ್ಕತ್ತಾದ ಉತ್ತರ ಭಾಗದಲ್ಲಿರುವ ಜನಪ್ರಿಯ ಚೋರ್ ಬಾಗನ್ ಸಾರ್ವ ಜನಿಕ ದುರ್ಗಾ ಪೂಜಾ ಪೆಂಡಾಲ್ನಲ್ಲಿ ಶನಿವಾರ ಸಂಜೆ ಭಾರೀ ಕಾಲ್ತುಳಿತ ಸಂಭವಿಸಿದೆ. ಪ್ರಾಥಮಿಕ ಮಾಧ್ಯಮ ವರದಿಗಳ ಪ್ರಕಾರ, ಈ ದುರಂತದಲ್ಲಿ ಕನಿಷ್ಠ ೧೭ ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ ಮತ್ತು ೩೫ ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.