ಗೋಣಿಕೊಪ್ಪಲು, ಅ. ೧೭: ಶ್ರೀ ಕಾವೇರಿ ದಸರಾ ಸಮಿತಿ ವತಿಯಿಂದ ಗೋಣಿಕೊಪ್ಪಲು ದಸರಾ ಅಂಗವಾಗಿ ನಡೆದ ೬ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಹಾಸ್ಯ ನಾಟಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ಪ್ರಸಿದ್ಧ ಚಲನಚಿತ್ರ ಹಿನ್ನೆಲೆ ಗಾಯಕಿ ಸಂಗೀತ ನಿರ್ದೇಶಕಿ, ಡಾ. ಶಮಿತಾ ಮಲ್ನಾಡ್ ಹಾಡುಗಾರಿಕೆಯೊಂದಿಗೆ ‘ಜನನಿ’ ಮಹಿಳಾ ಬ್ಯಾಂಡ್ ಸಂಗೀತ ರಸ ಸಂಜೆ ಕಾರ್ಯಕ್ರಮವು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸಿದ್ದರು