ನಾಪೋಕ್ಲು, ಅ. ೧೮: ಸಮೀಪದ ಇತಿಹಾಸ ಪ್ರಸಿದ್ಧ ಬಲಮುರಿಯ (ಬಲಂಬೇರಿ) ಶ್ರೀ ಅಗಸ್ತೆö್ಯÃಶ್ವರ ದೇವಾಲಯದಲ್ಲಿ ಭಾನುವಾರ ಕಾವೇರಿ ನದಿಗೆ ಮಹಾ ಮಂಗಳಾರತಿಯೊAದಿಗೆ ಜಾತ್ರಾ ಮಹೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಭಕ್ತಾದಿಗಳು ಪುಣ್ಯತೀರ್ಥ ಸ್ನಾನ ಮಾಡಿ ವಿಶೇಷ ಪೂಜೆಗಳನ್ನು ನೆರವೇರಿಸಿದರು. ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಕೇಶ ಮುಂಡನ, ಪಿಂಡಪ್ರದಾನ, ಕಾವೇರಿ ತೀರ್ಥಸ್ನಾನ, ಬಾಳೋಪಾಟ್ ಮತ್ತಿತರ ಕಾರ್ಯಗಳು ಜರುಗಿದವು. ಮಧ್ಯಾಹ್ನ ೧೨ ಗಂಟೆಗೆ ಕಾವೇರಿ ನದಿಗೆ ಮಹಾ ಮಂಗಳಾರತಿ ಮತ್ತು ಪೂಜಾ ವಿಧಿ ವಿಧಾನಗಳನ್ನು ಕ್ಷೇತ್ರದ ಅರ್ಚಕ ಮಹಾಬಲೇಶ್ವರ ಭಟ್ ಹಾಗೂ ತಂಡದವರು ನೆರವೇರಿಸಿದರು. ಬಳಿಕ ನದಿಯಿಂದ ಪವಿತ್ರ ನೀರನ್ನು ಅರ್ಚಕರು ಬಿಂದಿಗೆಯಲ್ಲಿ ತುಂಬಿ ಶ್ರದ್ಧಾ ಭಕ್ತಿಯಿಂದ ಚಂಡೆ ವಾದ್ಯ ಮೇಳದೊಂದಿಗೆ ದೇವಾಲಯಕ್ಕೆ ಕೊಂಡೊಯ್ದು ದೇವರಿಗೆ ಅಭಿಷೇಕ ಮಾಡಲಾಯಿತು. ಆನಂತರ ವಿಶೇಷ ಮಹಾಪೂಜೆ, ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಅಗಸ್ತೆö್ಯÃಶ್ವರ ದೇವಾಲಯದ ತಕ್ಕರು, ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಕೊಂಗೀರAಡ ಸಾದು ತಮ್ಮಯ್ಯ ಮಾತನಾಡಿ ಈ ಕ್ಷೇತ್ರ ಬಹಳ ಪ್ರಾಮುಖ್ಯತೆಯನ್ನು ಹೊಂದಿದ್ದು, ಇಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಆಗಬೇಕಿದೆ.

ಭಾಗಮಂಡಲದ ತ್ರಿವೇಣಿ ಸಂಗಮದ ರೀತಿಯಲ್ಲಿ ಬಲಮುರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬಿದ್ದಂಡ ಉಷಾದೇವಮ್ಮ ಮಾತನಾಡಿ ಬಲಮುರಿ ಜಿಲ್ಲೆಯ ಎರಡನೆಯ ಪುಣ್ಯ ಕ್ಷೇತ್ರ. ಇಲ್ಲಿ ಮೂಲ ಸೌಕರ್ಯದ ಕೊರತೆಗಳಿದ್ದು ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮಕ್ಕೆ ಕ್ಷೇತ್ರವನ್ನು ಒಳಪಡಿಸಿದರೆ ಅನುಕೂಲವಾಗಲಿದೆ. ಕಳೆದ ವರ್ಷದ ಜಾತ್ರೆಯ ಸಂದರ್ಭ ಶಾಸಕ ಎ.ಎಸ್. ಪೊನ್ನಣ್ಣ ಅವರು ಬಲಮುರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದು ಅದು ಈಡೇರಬೇಕಿದೆ ಎಂದರು.

ಈ ಸಂದರ್ಭ ಅಗಸ್ತೆö್ಯÃಶ್ವರ ದೇವಾಲಯದ ಆಡಳಿತ ಮಂಡಳಿ ಕಾರ್ಯದರ್ಶಿ ಪೊನ್ನಚ್ಚನ ಜಯ , ಖಜಾಂಚಿ ಆಂಗಿರ ಸಂತೋಷ್, ಬೊಳ್ಳಚೆಟ್ಟಿರ ಅಚ್ಚಪ್ಪ , ಅನ್ನದಾನ ಸಮಿತಿ ಅಧ್ಯಕ್ಷ ಬೊಳ್ಳಚೆಟ್ಟಿರ ವಿಜಯ್ ಚೆಟ್ಟಿಚ್ಚ, ಉಪಾದ್ಯಕ್ಷ ಪಾಲಂದಿರ ಚಂಗಪ್ಪ , ಬೊಳ್ಳಚೆಟ್ಟಿರ ಸುರೇಶ್ , ಕುಂದನ ಪ್ರಭಾನಂದ . ದೇವಾಲಯದ ಆಡಳಿತ ಮಂಡಳಿ ಹಾಗೂ ಅನ್ನದಾನ ಸಮಿತಿಯ ಪದಾಧಿಕಾರಿಗಳು ಸದಸ್ಯರು , ಚುನಾಯಿತ ಪ್ರತಿನಿಧಿಗಳು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕಣ್ವ ಮುನೇಶ್ವರ ದೇವಾಲಯ

ಬಲಮುರಿ ಕಾವೇರಿ ನದಿಯ ಎಡದಂಡೆಯಲ್ಲಿರುವ ಶ್ರೀ ಕಣ್ವ ಮುನೇಶ್ವರ ದೇವಾಲಯದಲ್ಲಿ ಜಾತ್ರಾ ಮಹೋತ್ಸವವು ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಉತ್ಸವದ ಅಂಗವಾಗಿ ದೇವಾಲಯದ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಿ ಮಧ್ಯಾಹ್ನ ಮಹಾಪೂಜೆ ಬಳಿಕ ಭಕ್ತಾದಿಗಳಿಗೆ ತೀರ್ಥ-ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು. ಅರ್ಚಕ ರವಿ ಕಲ್ಲುರಾಯ ಧಾರ್ಮಿಕ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಉತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ನೆರವಂಡ ಉತ್ತಪ್ಪ, ಕಾರ್ಯದರ್ಶಿ ಚೆಯ್ಯಂಡ ತಿಮ್ಮಯ್ಯ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಮುಖರು ಮತ್ತು ಅಪಾರ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.

-ದುಗ್ಗಳ ಸದಾನಂದ