ಕೂಡಿಗೆ, ಅ. ೧೮: ಸಾಮಾಜಿಕ ಸೇವಾ ಕಾರ್ಯಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಕೊಡುಗೆಗಳನ್ನು ನೀಡುವ ವ್ಯಕ್ತಿಗಳನ್ನು ಸಮಾಜ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಅರಮೇರಿ - ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಕೂಡಿಗೆ ಸಮೀಪದ ಶಿರಂಗಾಲ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೂ ಆದ ಸಮಾಜಸೇವಕ ಎಸ್.ವಿ. ನಂಜುAಡಪ್ಪ ಅವರ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿ, ಎಸ್.ವಿ. ನಂಜುAಡಪ್ಪ ಅವರು ತಮ್ಮ ಸೇವಾ ಕಾರ್ಯಗಳಿಂದ ಗ್ರಾಮ ಪಂಚಾಯಿತಿಯ ಮಾದರಿ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ ಎಂದರು.
ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಸದಾ ತಮ್ಮ ಗ್ರಾಮದ ಅಭಿವೃದ್ಧಿಯ ತುಡಿತ ಹೊಂದಿದ್ದ ನಂಜುAಡಪ್ಪ ಅವರು, ಶಿರಂಗಾಲ ಪದವಿಪೂರ್ವ ಕಾಲೇಜಿನ ರೂವಾರಿಯೂ ಆಗಿದ್ದು, ಸಮಾಜದ ಹಲವು ಅಭಿವೃದ್ಧಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ಎಸ್.ವಿ. ನಂಜುAಡಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಮತ್ತು ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸಿದ್ದಾರೆ ಎಂದರು.
ಮುಳ್ಳೂರು ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಮಾತನಾಡಿ, ಗ್ರಾಮ ಪಂಚಾಯಿತಿ ಗ್ರಾಮಮಟ್ಟದ ಸ್ಥಳೀಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರದ ಯೋಜನೆಗಳ ಅನುಷ್ಠಾನದ ಮೂಲಕ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಏಳು ದಶಕಗಳಿಗೂ ಹೆಚ್ಚು ಕಾಲ ತಮ್ಮನ್ನು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.
ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ ಹಾಗೂ ಕಲ್ಲಳ್ಳಿ ರುದ್ರಮುನಿ ಸ್ವಾಮೀಜಿ ಮಾತನಾಡಿದರು. ಸೋಮವಾರಪೇಟೆಯ ವೀರಶೈವ ಸಮಾಜದ ಮುಖಂಡ ಹಾಲಪ್ಪ, ನಂಜಮ್ಮ ನಂಜುAಡಪ್ಪ, ಎಸ್.ಎನ್. ಶಶಿ, ಎಸ್ಟಾçಗನ್, ಎನ್. ವಿಜಯ್, ಸಿ.ಎನ್. ಲೋಕೇಶ್ ಹಾಗೂ ಗ್ರಾಮಸ್ಥರು ಇದ್ದರು.