ವೀರಾಜಪೇಟೆ, ಅ. ೧೮: ವೀರಾಜಪೇಟೆ ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವೈಭವದ ನವರಾತ್ರಿ ಪೂಜಾ ಮಹೋತ್ಸವ ಆರಂಭಗೊAಡಿದೆ.
ದೇವಸ್ಥಾನದಲ್ಲಿ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನವರಾತ್ರಿ ಉತ್ಸವ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಪೂಜಾ ಕಾರ್ಯಕ್ರಮದ ಭಾಗವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮುತ್ತೆöÊದೆಯರಿಗೆ ಅರಿಶಿನ-ಕುಂಕುಮ, ತಾಂಬೂಲ ನೀಡಲಾಯಿತು. ಧಾರ್ಮಿಕ ಸಮಾರಂಭದಲ್ಲಿ ವೀರಾಜಪೇಟೆ ಹಾಗೂ ಸುತ್ತಮುತ್ತಲ ಪ್ರದೇಶದ ಭಕ್ತಾದಿಗಳು ಭಾಗವಹಿಸಿದ್ದರು.