ಕೂಡಿಗೆ, ಅ. ೧೮: ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿ ಶ್ರದ್ಧಾಭಕ್ತಿಯಿಂದ ಚಂಡಿಕಾ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ದೇವಾಲಯದ ಆವರಣದಲ್ಲಿ ಮೊದಲು ಗಣಪತಿ ಹೋಮ, ನಂತರ ಶ್ರೀ ಮೃತ್ಯುಂಜಯ ಹೋಮ, ಚಂಡಿಕಾ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಸೇರಿದಂತೆ ದೇವಾಲಯದ ಆವರಣದಲ್ಲಿ ವಿವಿಧ ದೇವರುಗಳಿಗೆ ಪೂಜಾ ಕೈಂಕರ್ಯಗಳು ನಡೆದವು. ನಂತರ ಮಧ್ಯಾಹ್ನ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನಸಂರ್ತಪಣೆ ನಡೆಯಿತು. ಪೂಜಾ ಕೈಂಕರ್ಯಗಳನ್ನು ಕೇರಳದ ಸಜಿ ಪಣಿಕರ್, ಸುಕುಮಾರ್ ತಂಡದವರು ನೆರವೇರಿಸಿದರು. ಈ ಸಂದರ್ಭ ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ಎಂ. ಚಾಮಿ, ಉಪಾಧ್ಯಕ್ಷ ಮುತ್ತಪ್ಪ, ಕಾರ್ಯದರ್ಶಿ ಸುರೇಶ್, ಖಜಾಂಚಿ ಅನಂತ ಕುಮಾರ್, ಸಹ ಕಾರ್ಯದರ್ಶಿ ಹೆಚ್.ಸಿ. ಮೋಹನ್ ಕುಮಾರ್, ದೇವಾಲಯದ ಪ್ರಧಾನ ಅರ್ಚಕ ಸುಬ್ರಮಣ್ಯ ಸ್ವಾಮಿ ಸೇರಿದಂತೆ ಸಮಿತಿ ನಿರ್ದೇಶಕರು, ಕೂಡಿಗೆ, ಕೂಡುಮಂಗಳೂರು ಹಾರಂಗಿ ಗ್ರಾ.ಪಂ. ವ್ಯಾಪ್ತಿಯ ನೂರಾರು ಭಕ್ತರು ಆಗಮಿಸಿದರು. ಆಗಮಿಸಿದ್ದ ಭಕ್ತರಿಗೆ ದೇವಾಲಯ ಸಮಿತಿ ವತಿಯಿಂದ ಅನ್ನಸಂರ್ತಪಣೆ ಏರ್ಪಡಿಸಲಾಗಿತ್ತು.