ನಾಪೋಕ್ಲು, ಅ. ೧೯: ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ಕಾವೇರಿ ತೀರ್ಥ ವಿತರಣೆ ಕಾರ್ಯಕ್ರಮ ನಡೆಯಿತು.

ಮೈಸೂರಿನಲ್ಲಿರುವ ಕೊಡಗು ಗೌಡ ಸಮಾಜದ ಸಮುದಾಯ ಭವನದಲ್ಲಿ ವೆಂಕಟರಮಣ ಸ್ವಾಮಿ ಹಾಗೂ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜಾ ವಿಧಿವಿಧಾನಗಳ ನಂತರ ಕಾವೇರಿ ತೀರ್ಥ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ, ಕಾರ್ಯದರ್ಶಿ ಪೊನ್ನೆಟಿ ನಂದ, ಖಜಾಂಚಿ ಉಳುವಾರನ ಸುರೇಶ್ ಹಾಗೂ ಸಹ ಕಾರ್ಯದರ್ಶಿ ನಡುಮನೆ ಚಂಗಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.