ಸುAಟಿಕೊಪ್ಪ, ಅ.೧೯: ಮಾದಾಪುರ ಸಾರ್ವಜನಿಕ ಆಯುಧಪೂಜಾ ಆಚರಣಾ ಸಮಿತಿ ವತಿಯಿಂದ ೬ನೇ ವರ್ಷದ ಅದ್ದೂರಿ ಆಯುಧಪೂಜಾ ಸಮಾರಂಭವನ್ನು ತಾ. ೨೦ ರಂದು (ಇಂದು) ಮಾದಾಪುರ ಗ್ರಾಮ ಪಂಚಾಯಿತಿ ಆವರಣದ ಬಸ್ನಿಲ್ದಾಣದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ತಿಳಿಸಿದೆ. ಆಚರಣೆಯ ಅಂಗವಾಗಿ ಮಧ್ಯಾಹ್ನ ೧೨ ಗಂಟೆಯಿAದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆ, ಮಂಗಳೂರಿನ ವಿಶ್ವಾಸ್ ಮ್ಯೂಸಿಕ್ ತಂಡದ ಗಾಯಕರಿಂದ ಸಂಗೀತ ರಸ ಸಂಜೆ ಹಾಗೂ ವಿವಿಧ ವಾಹನಗಳ ಅಲಂಕಾರ ಸ್ಪರ್ಧೆ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯ ಅಧ್ಯಕ್ಷತೆಯನ್ನು ಸಾರ್ವಜನಿಕ ಆಯುಧಪೂಜಾ ಆಚರಣಾ ಸಮಿತಿ ಅಧ್ಯಕ್ಷ ವಿ. ಕುಮಾರ್ ವಹಿಸಲಿದ್ದಾರೆ. ಮಡಿಕೇರಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಉತ್ತಪ್ಪ ಮತ್ತು ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಟಿ.ಪಿ. ಸಂದೇಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾದಾಪುರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಹೇಮಂತ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕೆ. ನಾಯರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಲತೀಫ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಮಾರಂಭದ ಸಮಾರೋಪ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಹಾಗೂ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಸಮಿತಿ ಅಧ್ಯಕ್ಷ ವಿ. ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಉದ್ಯಮಿ ಲಲ್ಲೇಶ್ ರೆಡ್ಡಿ, ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ, ಕರ್ನಾಟಕ ಒಕ್ಕಲಿಗ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಟಿ.ಪಿ. ಸಂದೇಶ್, ಬಿ. ಭಾರತೀಶ್, ಜಿಲ್ಲಾಡಳಿತದ ಕಾನೂನು ಸಲಹೆಗಾರ ಎ. ಲೋಕೇಶ್ ಕುಮಾರ್, ಮಾದಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಕೆ. ನಾಯರ್, ಉದ್ಯಮಿ ಎಡಿಕೇರಿ ಪ್ರಸನ್ನ, ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಕೆದಕಲ್ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ. ಸಂಜು ಪೊನ್ನಪ್ಪ, ನಿರ್ಮಾಪಕ ಹಾಗೂ ಚಲನಚಿತ್ರ ನಟ ಆದ್ಯ ತಿಮ್ಮಯ್ಯ, ಕಾಫಿ ಬೆಳೆಗಾರ ನಂದಬೆಳ್ಳಿಯಪ್ಪ, ಉದಯ್ ಈಶ್ವರನ್, ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ. ವಿಜಯನ್, ಸಮಾಜ ಸೇವಕರಾದ ನಾಪಂಡ ಮುತ್ತಪ್ಪ, ಮನು ಮುದ್ದಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.