ನವದೆಹಲಿ, ಅ. ೨೨: ಕಸ್ತೂರಿ ರಂಗನ್ ವರದಿಗೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದAತೆ ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

ದೆಹಲಿಯಲ್ಲಿ ಕೇಂದ್ರ ಪರಿಸರ, ಅರಣ್ಯ ಇಲಾಖೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು ಕಸ್ತೂರಿರಂಗನ್ ವರದಿಯ ಆಧಾರದ ಮೇಲೆ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷö್ಮ ಪ್ರದೇಶ (ಇSಂ) ಘೋಷಣೆಗೆ ಸಂಬAಧಿಸಿದAತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆಯು ಹೊರಡಿಸಿರುವ ೨೭ ಜುಲೈ ೨೦೨೬ರ ೭ನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದAತೆ ಕೋರಿ ದಿನಾಂಕ: ೨೫-೦೯-೨೦೨೬ ರ ಪತ್ರದ ಮೂಲಕ ಭಾರತದ ಪ್ರಧಾನ ಮಂತಿ ನರೇಂದ್ರ ಮೋದಿ ಅವರಿಗೂ ಮನವಿ ಮಾಡಲಾಗಿದೆ.

ರಾಜ್ಯ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ (ಊಐಅ) ವರದಿ ಸಲ್ಲಿಕೆಯಾಗಿ, ಒಂದು ವರ್ಷದ ಅವಧಿಯಲ್ಲಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಇದನ್ನು ಅಂತಿಮಗೊಳಿಸಬಾರದು ಮತ್ತು ರಾಜ್ಯ ಸರ್ಕಾರದ ಸಮಾಲೋಚನೆಯೊಂದಿಗೆ ಭಾರತ ಸರ್ಕಾರವು ಮುಂದಿನ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಕೋರಿದರು.