ವೀರಾಜಪೇಟೆ, ಅ. ೨೨: ವೀರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತ ಇದರ ವತಿಯಿಂದ ಮಹಿಳಾ ಸಮಾಜದ ಸಭಾಂಗಣದಲ್ಲಿ ಶಾರದಾ ಪೂಜೆ ನಡೆಯಿತು. ಪೂಜೆಯ ಬಳಿಕ ಶಾರದಾ ದೇವಿಗೆ ನೈವೇದ್ಯ ಅರ್ಪಿಸಲಾಯಿತು.

ಮಹಿಳಾ ಸದಸ್ಯರು ದೇವರ ನಾಮ ಹಾಗೂ ಭಜನೆಯನ್ನು ಮಾಡಿದರು.

ಪೂಜೆಯ ಬಳಿಕ ಪ್ರಸಾದ ವಿತರಿಸಲಾಯಿತು. ಈ ಸಂದರ್ಭ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ, ಉಪಾಧ್ಯಕ್ಷೆ ಬಿ.ಆರ್. ಸಬಿತ, ನಿರ್ದೆಶಕರಾದ ಆಶಾ ಚಿಣ್ಣಪ್ಪ, ಯು.ಕೆ. ಪೊನ್ನಮ್ಮ, ಕುಸುಮ ಸೋಮಣ್ಣ, ಜಯಲೀಲಾ ಸತೀಶ್, ಪಿ.ಕೆ. ನೀಲಮ್ಮ, ಪ್ರೇಮ ಮಂಜುನಾಥ್, ಬಿ.ಎನ್. ಭಾರತಿ, ಬಿ.ಯಶೋಧ, ಹೆಚ್.ಆರ್. ಪುಷ್ಪವಾಸು, ಪುಷ್ಪ ಐತಪ್ಪ, ಮೆಟಿಲ್ಡಾ ಲೋಬೋ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಜಿ. ಪುಷ್ಪಲತಾ ಸೇರಿದಂತೆ ಮಹಿಳಾ ಸಮಾಜದ ಸದಸ್ಯರುಗಳು ಹೆಚ್ಚಿನ ಹಾಜರಿದ್ದರು.