ಪೊನ್ನಂಪೇಟೆ, ಅ. ೨೨: ಶ್ರೀ ಕಾವೇರಿ ದಸರಾ ಸಮಿತಿ, ಗೋಣಿಕೊಪ್ಪಲು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ದಸರಾ ಜನೋತ್ಸವ ವೇದಿಕೆಯಲ್ಲಿ ಯುವ ದಸರಾ ಅಂಗವಾಗಿ ಕಳೆದ ಹಲವು ವರ್ಷಗಳಿಂದ ಆರೋಗ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಸೇವೆಯ ಮೂಲಕ ಗುರುತಿಸಿಕೊಂಡಿರುವ ಸಮಾಜಸೇವಕ ಚೋಕಂಡ ಸಂಜು ಸುಬ್ಬಯ್ಯ ಹಾಗೂ ಶೈಕ್ಷಣಿಕವಾಗಿ ಸಾಧನೆ ಮಾಡಿದ ಆಪಟ್ಟಿರ ಕವಿನ ಕಾವೇರಮ್ಮ ಅವರನ್ನು ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷ, ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳಾದ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಸನ್ಮಾನಿಸಿದರು. ಈ ಸಂದರ್ಭ ಕಾವೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಯುವ ದಸರಾ ಸಮಿತಿ ಅಧ್ಯಕ್ಷ ನಾಮೇರ ಅಂಕಿತ್ ಪೊನ್ನಪ್ಪ, ಅತಿಥಿಗಳು ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು.