ಕೂಡಿಗೆ, ಅ. ೨೨: ಕೂಡಿಗೆಯಿಂದ ಕುಶಾಲನಗರದತ್ತ ತೆರಳುತ್ತಿದ್ದ ಕಾರೊಂದು ಮುಳ್ಳುಸೋಗೆ ಸಮೀಪ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಮೀದ್ ಜಾನ್ ಎಂಬವರು ಗಾಯಗೊಂಡ ಘಟನೆ ನಡೆದಿದೆ.
ಆನಂದ ಎಂಬವರು ಚಲಾಯಿಸುತ್ತಿದ್ದ ಕಾರು ಪಾದಚಾರಿ ಹಮೀದ್ ಜಾನ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಹಮೀದ್ ಜಾನ್ ಅವರಿಗೆ ಗಾಯಗಳಾಗಿವೆ. ಗಾಯಾಳುವಿಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ಘಟನೆ ಕುರಿತು ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.