ಮಡಿಕೇರಿ, ಅ.೨೨: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೊಡಗು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಶಕ್ತಿ ದಿನಪತ್ರಿಕೆಯ ಸ್ಥಾಪಕ ಸಂಪಾದಕ ಹಾಗೂ ಸಾಹಿತಿ ದಿ. ಬಿ.ಎಸ್. ಗೋಪಾಲಕೃಷ್ಣ ಅವರ ಹೆಸರಿನಲ್ಲಿ ನೀಡಲಾಗುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ತಾ. ೨೪ ರಂದು ಮಧ್ಯಾಹ್ನ ೩ ಗಂಟೆಗೆ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿದೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ದತ್ತಿ ಪ್ರಶಸ್ತಿಗೆ ಸಾಹಿತಿ ಹಾಗೂ ವಕೀಲ ಬಾಳೆಯಡ ಕಿಶನ್ ಪೂವಯ್ಯ ಅವರು ರಚಿಸಿರುವ ‘ರಾಜಕೀಯ ಮತ್ತು ಪ್ರಕೃತಿ’ ಕೃತಿ ಆಯ್ಕೆಯಾಗಿದೆ. ಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಪುರಸ್ಕೃತ ಕೃತಿಯ ಕುರಿತು ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ದತ್ತಿದಾನಿ ಹಾಗೂ ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ. ಅನಂತಶಯನ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್ ಹಾಗೂ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.