ಮಡಿಕೇರಿ, ಅ.೨೨: ಜಿಲ್ಲಾ ಪೊಲೀಸ್ ಘಟಕ ವತಿಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ನಡೆಯಿತು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸೇರಿದಂತೆ ಗಣ್ಯರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ, ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ ಪೊಲೀಸರ ಮೂಲಭೂತ ಕರ್ತವ್ಯಗಳಲ್ಲಿ ಪ್ರಮುಖವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಪ್ರತಿಯೊಬ್ಬ ನಾಗರಿಕರಿಗೆ ಸಂವಿಧಾನ ಬದ್ಧವಾಗಿ ಇರುವ ಹಕ್ಕನ್ನು ರಕ್ಷಣೆ ಮಾಡುವುದು, ಅಪರಾಧ ಪ್ರಕರಣ ತಡೆಯುವುದು, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಆಗದಂತೆ ನೋಡಿಕೊಳ್ಳುವುದು ಅತಿಮುಖ್ಯವಾಗಿದೆ ಎಂದರು.
ಪೊಲೀಸ್ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ತಮ್ಮ ಅಮೂಲ್ಯ ಜೀವ ಕಳೆದುಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸ್ಮರಣೆಗಾಗಿ ಈ ದಿನವನ್ನು ಪೊಲೀಸ್ ಸಂಸ್ಮರಣಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಮಾತನಾಡಿ ರಾಷ್ಟçದಲ್ಲಿ ಪೊಲೀಸ್ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ (೨೦೨೫-೨೬ ನೇ ಅವಧಿಯಲ್ಲಿ) ೧೫೪ ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇವರಲ್ಲಿ ರಾಜ್ಯದ ಐವರು ಸೇರಿದ್ದಾರೆ ಎಂದು ಹುತಾತ್ಮ ಪೊಲೀಸರ ಹೆಸರನ್ನು ಪ್ರಸ್ತಾಪಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು.
ಹಾಸನ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ, ಉಪ ಪೊಲೀಸ್ ವರಿಷ್ಠಾಧಿಕಾರಿಗಳ ಪರವಾಗಿ ಚಂದ್ರಶೇಖರ, ಗೃಹ ರಕ್ಷಕ ದಳ ಪರವಾಗಿ ಸೂರಜ್, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ವಕೀಲರ ಸಂಘದ ಅಧ್ಯಕ್ಷ ಸಿ.ಟಿ.ಜೋಸೆಫ್, ಪ್ರಮುಖರಾದ ಅಂಬೆಕಲ್ಲು ನವೀನ್, ಸಂತೋಷ, ದಿನೇಶ್, ಮಂಡುವAಡ ಮುತ್ತಪ್ಪ, ಸೂರ್ತಲೆ ಸೋಮಣ್ಣ, ಉಷಾ, ಚೆನ್ನಕೇಶವ, ಖತಿಜಾ, ಮಧುಚಂದ್ರ, ಶಶಿಕುಮಾರ, ಕಂದಮಣಿ ಮತ್ತಿತರರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವಿಟ್ಟು ನಮಿಸಿದರು.
ನಂತರ ಪೊಲೀಸ್ ಕವಾಯತು ತಂಡದವರು ಮೂರು ಸುತ್ತು ಕುಶಾಲತೋಪು ಹಾರಿಸಿದರು. ಈ ಸಂದರ್ಭ ಪೊಲೀಸ್ ಬ್ಯಾಂಡ್ ತಂಡದವರು ರಾಷ್ಟçಗೀತೆ ನುಡಿಸಿದರು. ಬಳಿಕ ಎರಡು ನಿಮಿಷ ಮೌನಾಚರಿಸಲಾಯಿತು. ರಾಷ್ಟçದ ಆಂತರೀಕ ಭದ್ರತೆಯಲ್ಲಿ ಪೊಲೀಸರ ಸೇವೆ ಅನುಪಮವಾದುದು, ಶಾಂತಿ-ಸುರಕ್ಷತೆ ಕಾಪಾಡುವುದು ಹಾಗೂ ಸಮಾಜ ಘಾತುಕ ಶಕ್ತಿಗಳನ್ನು ನಿಯಂತ್ರಿಸುವಲ್ಲಿ ಪೊಲೀಸರ ಪಾತ್ರ ಹೆಚ್ಚಿನದ್ದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಹೇಳಿದರು..
ಉಪ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಕುಮಾರ್, ಐ.ಪಿ.ಮೇದಪ್ಪ, ಅನೂಪ್ ಮಾದಪ್ಪ, ಜಿಲ್ಲೆಯ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇದ್ದರು, ಪೊಲೀಸ್ ಮುಖ್ಯಪೇದೆ ಫಾರುಕ್, ಲೋಕೇಶ್ ಮತ್ತು ಸುಕನ್ಯಾ ನಿರೂಪಿಸಿ, ವಂದಿಸಿದರು.