ಮಡಿಕೇರಿ, ಅ. ೨೨: ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ, ಯೋಗಾಸನದಲ್ಲಿ ವಿಶ್ವ ದಾಖಲೆ ಮಾಡಿರುವ ಬಾಲಕಿ ಸಿಂಚನ, ಮುಖ್ಯಮಂತ್ರಿಗಳ ಸಂವಹನ ಸಲಹೆಗಾರ ದೀಪಕ್ ತಿಮ್ಮಯ್ಯ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರುಗಳನ್ನು ಮಡಿಕೇರಿ ದಸರಾ ಸಮಿತಿ ವತಿಯಿಂದ ಆಯುಧ ಪೂಜೆಯಂದು ಸನ್ಮಾನಿಸಲಾಯಿತು.
ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು. ದಸರಾ ಸಮಿತಿ ಪದಾಧಿಕಾರಿಗಳು, ಗಣ್ಯರು ಇದ್ದರು.