ಸೋಮವಾರಪೇಟೆ, ಅ. ೨೩: ೭೧ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳನ್ನು ಒಳಗೊಂಡAತೆ ಪೂರ್ವಭಾವಿ ಸಭೆ ನಡೆಯಿತು.
ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್ ಕೃಷ್ಣಮೂರ್ತಿ ಅವರು, ನವೆಂಬರ್ ೧ರಂದು ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸ ಲಾಗುವುದು. ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು, ಸಾರ್ವಜನಿಕರ ಭಾಗವಹಿಸುವಿಕೆ ಮುಖ್ಯ ಎಂದರು.
ವಿವಿಧ ಶಾಲಾ ವಿದ್ಯಾರ್ಥಿ ಗಳಿಂದ ಸ್ತಬ್ಧ ಚಿತ್ರಗಳು, ಮೆರವಣಿಗೆ, ಪೊಲೀಸ್ ಇಲಾಖೆ, ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಂದ ಪಥ ಸಂಚಲನ, ಶೈಕ್ಷಣಿಕವಾಗಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಸಮಾಜ ಸೇವೆ, ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದವರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸಿಡಿಪಿಓ ಶ್ರೀದೇವಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಡಿ. ವಿಜೇತ್, ಕರ್ನಾಟಕ ರಕ್ಷಣಾ ವೇದಿಕೆ ನಗರಾಧ್ಯಕ್ಷ ಬಿ. ಎಸ್. ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.