ವೀರಾಜಪೇಟೆ, ಅ. ೨೩: ವೀರಾಜಪೇಟೆಯ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ಒಂಬತ್ತು ದಿನಗಳ ಕಾಲ ನವರಾತ್ರಿ ಉತ್ಸವ ನೆರವೇರಿತು.
ದೇವಸ್ಥಾನದಲ್ಲಿ ಪ್ರತಿ ದಿನವೂ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಶೇಷ ಅಲಂಕಾರ ಸೇವೆ, ಮಹಾಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಪೂರ್ವಕವಾಗಿ ಜರುಗಿ ದವು. ನವರಾತ್ರಿಯ ಎಲ್ಲಾ ದಿನಗಳಲ್ಲೂ ಶ್ರೀ ದೇವಿಗೆ ವೈವಿಧ್ಯಮಯ ಅಲಂಕಾರಗಳನ್ನು ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.
ಉತ್ಸವದ ಅಂಗವಾಗಿ ಆಗಮಿಸಿದ್ದ ನೂರಾರು ಭಕ್ತಾದಿಗಳಿಗೆ ಪ್ರತಿದಿನ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಪೂಜಾ ಕಾರ್ಯಕ್ರಮದ ಭಾಗವಾಗಿ ದೇವಸ್ಥಾನಕ್ಕೆ ಆಗಮಿಸಿದ್ದ ಮುತ್ತೆöÊದೆಯರಿಗೆ ಅರಿಶಿನ-ಕುಂಕುಮ ಮತ್ತು ತಾಂಬೂಲ ನೀಡಿ ಗೌರವಿಸಿ, ಶುಭ ಹಾರೈಸಲಾಯಿತು. ಒಂಬತ್ತು ದಿನಗಳ ಕಾಲ ಜರುಗಿದ ಈ ಧಾರ್ಮಿಕ ಸಮಾರಂಭದಲ್ಲಿ ವೀರಾಜಪೇಟೆ ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಾಂತರ ಪ್ರದೇಶಗಳಿಂದ ಅಪಾರ ಸಂಖ್ಯೆಯ ಭಕ್ತಾದಿಗಳು ಭಾಗವಹಿಸಿ, ಶ್ರೀ ದೇವಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯವರು, ಪದಾಧಿಕಾರಿಗಳು ಇದ್ದರು.