ಮಡಿಕೇರಿ, ಅ. ೨೪: ಪೆರಾಜೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದ ೧೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಮೂರ್ನಾಡು ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕೂಡಂಡ ಜಿ. ನಿಲೀಷಾ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ತಾ.೨೭ ರಂದು ನಡೆಯಲಿರುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.