ಕುಶಾಲನಗರ, ಅ.೨೫: ಕಾವೇರಿ ನದಿ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಅಖಿಲ ಭಾರತೀಯ ಸನ್ಯಾಸಿ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಕಾವೇರಿ ಜಾಗೃತಿ ರಥಯಾತ್ರೆಯ ತಂಡ ಭಾನುವಾರ ಮಧ್ಯಾಹ್ನ ಕೊಡಗು ಜಿಲ್ಲೆಗೆ ಆಗಮಿಸಿತು.
ಜಿಲ್ಲೆಯ ಗಡಿ ಭಾಗವಾದ ಕುಶಾಲನಗರ-ಕೊಪ್ಪದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಹಾಗೂ ನಮಾಮಿ ಕಾವೇರಿ ಬಳಗದ ಪ್ರಮುಖರು ಸಾಧು-ಸಂತರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್, ಜಿಲ್ಲಾ ಅಧ್ಯಕ್ಷ ಕೊಡಗನ ಹರ್ಷ, ನಮಾಮಿ ಕಾವೇರಿ ಜಿಲ್ಲಾ ಅಧ್ಯಕ್ಷೆ ವನಿತಾ ಚಂದ್ರಮೋಹನ್, ಗೌರವ ಸಲಹೆಗಾರರಾದ ಸುಮನಾ ಮಳಲಗದ್ದೆ, ಜಿಲ್ಲಾ ಸಂಚಾಲಕ ವಿಠ್ಠಲ್ ಸಾಲಿಯಾನ್, ಧರಣಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಕುಶಾಲನಗರ-ಕೊಪ್ಪ ಗಡಿಭಾಗದಲ್ಲಿರುವ ಕಾವೇರಿ ಮಾತೆಯ ಪ್ರತಿಮೆಗೆ ಪೂಜೆ ಸಲ್ಲಿಸಿದ ಸಾಧು-ಸಂತರ ತಂಡ, ನದಿ ತಟದಲ್ಲಿ ಗಿಡಗಳನ್ನು ನೆಟ್ಟು ಬಳಿಕ ತಲಕಾವೇರಿಗೆ ತೆರಳಿ ವಾಸ್ತವ್ಯ ಹೂಡಿತು.
ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಹಾಗೂ ಅಖಿಲ ಭಾರತೀಯ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸನ್ಯಾಸಿ ಸಂಘದ ಆಶಯದಂತೆ ನಡೆಯುತ್ತಿರುವ ೧೬ನೇ ವರ್ಷದ ಕಾವೇರಿ ನದಿ ಜಾಗೃತಿ ರಥಯಾತ್ರೆಗೆ ತಾ. ೨೬ ರಂದು (ಇಂದು) ತಲಕಾವೇರಿಯಲ್ಲಿ ಬೆಳಿಗ್ಗೆ ೯ ಗಂಟೆಗೆ ಚಾಲನೆ ದೊರೆಯಲಿದೆ. ಪೂಂಪ್ಹಾರ್ ತನಕ ಜಾಗೃತಿ ರಥಯಾತ್ರೆ ಸಾಗಲಿದೆ. ತಲಕಾವೇರಿಯಲ್ಲಿ ಕಾರ್ಯಕ್ರಮದ ಬಳಿಕ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ.
ಸಂಜೆ ಕುಶಾಲನಗರದ ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ಕಾವೇರಿ ನದಿಗೆ ೧೯೧ನೇ ಹುಣ್ಣಿಮೆ ಮಹಾ ಆರತಿ ನಡೆಯಲಿದ್ದು, ರಥಯಾತ್ರೆಯ ತಂಡ ಪಾಲ್ಗೊಳ್ಳಲಿದೆ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ಸಂಜೆ ೪.೩೦ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ‘ಶಕ್ತಿ’ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ನಮಾಮಿ ಕಾವೇರಿ ಗೌರವ ಸಲಹೆಗಾರರಾದ ಸುಮನಾ ಮಳಲಗದ್ದೆ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಹಾಸನ ಜಿಲ್ಲಾ ಸಂಚಾಲಕ ಎಂ.ಎನ್. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಪ್ರಧಾನ ಅರ್ಚಕ ಶ್ರೀ ಕೃಷ್ಣಮೂರ್ತಿ ಭಟ್ ಅವರ ನೇತೃತ್ವದಲ್ಲಿ ಕುಶಾಲನಗರ ಸಮಸ್ತ ಮಹಿಳಾ ಭಜನಾ ಮಂಡಳಿಯಿAದ ಅಭಿಷೇಕ, ಭಜನೆ ಹಾಗೂ ಲಲಿತ ಸಹಸ್ರನಾಮ ಕಾರ್ಯಕ್ರಮಗಳು ನಡೆಯಲಿವೆ.
ಬಳಿಕ ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ರೋಟರಿ ಉದ್ಯಾನವನದಲ್ಲಿ ಸಂಜೆ ೬.೩೦ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಅಖಿಲ ಭಾರತ ಸನ್ಯಾಸಿ ಸಂಘದ ಸಂಚಾಲಕ ಶ್ರೀ ರಮಾನಂದ ಸ್ವಾಮೀಜಿ, ಹರಿದ್ವಾರದ ಅಖಂಡ ಪರಂ ಧಾಮ್ ಸ್ವಾಮೀಜಿ ಅನಂತಾನAದ ಗಿರಿಜೀ ಅವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ದೀಪಾರಾಧನೆಗೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಡಾ ಅಧ್ಯಕ್ಷ ಪ್ರಮೋದ್ ಮುತಪ್ಪ, ಉದ್ಯಮಿ ಹಾಗೂ ಸಮಾಜ ಸೇವಕ ಶರಣ್ ಪೂಣಚ್ಚ, ಎಸ್ಎಲ್ಎನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿಶ್ವನಾಥನ್, ಉದ್ಯಮಿ ಮನು ಪೆಮ್ಮಯ್ಯ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ತಮಿಳುನಾಡು ಪ್ರಾಂತ್ಯದ ಸಂಚಾಲಕ ವಾಸು ರಾಮಚಂದ್ರನ್, ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.