ಶಿವಮೊಗ್ಗ, ಅ. ೨೫: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಮುಂದಿನ ವರ್ಷದ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಈಗಾಗಲೇ ತೀರ್ಮಾನಿಸಿದೆ.
ಚುನಾವಣೆಗೆ ಸಂಬAಧಿಸಿದ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಈ ಸಂಬAಧ ಸುಮಾರು ೧,೮೦೦ ಅರ್ಜಿಗಳು ಸಲ್ಲಿಕೆಯಾಗಿವೆ.
ಒಂದು ವಾರದೊಳಗೆ ಆಕ್ಷೇಪಣೆಗಳನ್ನು ಪರಿಶೀಲಿಸಿ, ಈ ತಿಂಗಳ ಅಂತ್ಯದೊಳಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಲಾಗುವುದು ಎಂದರು.
ಅAತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಬಳಿಕ ಆಯೋಗ ಚುನಾವಣಾ ದಿನಾಂಕ ಘೋಷಿಸಲಿದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ, ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಲಾಗುತ್ತದೆ. ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲು ಆಯೋಗಕ್ಕೆ ಸುಮಾರು ಒಂದೂವರೆ ತಿಂಗಳ ಕಾಲಾವಕಾಶ ಬೇಕಾಗುತ್ತದೆ.
ಈ ಹಿನ್ನೆಲೆಯಲ್ಲಿ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಕರಣದ ತನಿಖೆ ನಡೆಯುತ್ತಿದ್ದು, ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ.
ವರದಿ ಬಂದ ಬಳಿಕ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.
ರಾಜ್ಯದಲ್ಲಿ ಬರ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕುಡಿಯುವ ನೀರಿನ ಪೂರೈಕೆಗಾಗಿ ಈಗಾಗಲೇ ೩೬ ಕೋಟಿ ಮೀಸಲಿಡಲಾಗಿದೆ. ಇದಲ್ಲದೆ, ಜಿಲ್ಲಾಧಿಕಾರಿಗಳ ಖಾತೆಯಲ್ಲಿಯೂ ಹಣ ಇರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕೊಳವೆ ಬಾವಿಗಳು ಬತ್ತಿಹೋದರೆ ೨೪ ಗಂಟೆಯೊಳಗೆ ಹೊಸ ಕೊಳವೆಬಾವಿ ಕೊರೆಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಅಗತ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ಅಥವಾ ಟ್ಯಾಂಕರ್ಗಳಲ್ಲಿ ನೀರು ಪೂರೈಸಲು ವ್ಯವಸ್ಥೆ ಮಾಡಲಾಗುವುದು. ರಾಜ್ಯಾದ್ಯಂತ ಬರ ನಿರ್ವಹಣೆಗೆ ಸಿದ್ಧತೆ ಕೈಗೊಳ್ಳಲಾಗಿದ್ದು, ಹಣದ ಕೊರತೆಯಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಎಲ್ಲೆಡೆ ಕುಡಿಯುವ ನೀರು ಪೂರೈಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ವರದಿ : ಇಂದ್ರೇಶ್